ADVERTISEMENT

ಬಸವ ಜಯಂತಿ: ಬಸವ ಮಂಟಪದಲ್ಲಿ ವಿವಿಧ ಕಾರ್ಯಕ್ರಮ

ಬಸವ ಜಯಂತಿ ಉತ್ಸವ ಸಮಿತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮನವಿ

​ಪ್ರಜಾವಾಣಿ ವಾರ್ತೆ
Published 30 ಏಪ್ರಿಲ್ 2022, 12:39 IST
Last Updated 30 ಏಪ್ರಿಲ್ 2022, 12:39 IST
ಬೀದರ್‌ನ ಬಸವ ಮಂಟಪದಲ್ಲಿ ಬಸವ ಜಯಂತಿ ಅಂಗವಾಗಿ ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು
ಬೀದರ್‌ನ ಬಸವ ಮಂಟಪದಲ್ಲಿ ಬಸವ ಜಯಂತಿ ಅಂಗವಾಗಿ ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು   

ಬೀದರ್: ಬಸವ ಜಯಂತಿ ಪ್ರಯುಕ್ತ ರಾಷ್ಟ್ರೀಯ ಬಸವ ದಳವು ಮೇ 3 ರಂದು ಇಲ್ಲಿಯ ಬಸವ ಮಂಟಪದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.

ಬಸವ ಮಂಟಪದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಮಾತನಾಡಿದ ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಪಾಟೀಲ ಗಾದಗಿ ಅವರು, ಮಂಗಳವಾರ ಬೆಳಿಗ್ಗೆ 10ಕ್ಕೆ ಷಟಸ್ಥಲ ಧ್ವಜಾರೋಹಣ, ಬಸವೇಶ್ವರ ಭಾವಚಿತ್ರಕ್ಕೆ ಪೂಜೆ, ಸಾಮೂಹಿಕ ಪ್ರಾರ್ಥನೆ ಹಾಗೂ ತೊಟ್ಟಿಲು ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಸಂಜೆ 6ಕ್ಕೆ ಬಸವ ಮಂಟಪದಿಂದ ಮೆರವಣಿಗೆ ಹೊರಟು ದರ್ಜಿ ಗಲ್ಲಿ ಮಾರ್ಗವಾಗಿ, ಪಾಂಡುರಂಗ ಮಂದಿರ ಸಮೀಪ ಬಸವ ಜಯಂತಿ ಉತ್ಸವ ಸಮಿತಿಯ ಮೆರವಣಿಗೆಯನ್ನು ಸೇರಲಿದೆ. ಬಸವ ಜಯಂತಿ ಉತ್ಸವ ಸಮಿತಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳಿಗೆ ಬಸವ ದಳದ ಸಂಪೂರ್ಣ ಬೆಂಬಲ ಇರಲಿದೆ ಎಂದು ತಿಳಿಸಿದರು.

ADVERTISEMENT

ಬಸವ ಜಯಂತಿ ಉತ್ಸವ ಸಮಿತಿಯ ಅಧ್ಯಕ್ಷ ಬಸವರಾಜ ಪಾಟೀಲ ಹಾರೂರಗೇರಿ ಮಾತನಾಡಿ, ಈ ಬಾರಿ ಸರ್ವ ಸಮುದಾಯಗಳೊಂದಿಗೆ ಅರ್ಥಪೂರ್ಣ ಬಸವ ಜಯಂತಿ ಆಚರಣೆಗೆ ನಿರ್ಧರಿಸಲಾಗಿದೆ. ಬಸವ ಭಕ್ತರು, ಬಸವಾನುಯಾಯಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಸಮಿತಿಯ ಗೌರವ ಸಲಹೆಗಾರ ಶಿವಶರಣಪ್ಪ ವಾಲಿ ಮಾತನಾಡಿ, ಬಸವ ಪರ ಸಂಘಟನೆಗಳು ಬಸವ ಜಯಂತಿಯನ್ನು ಯಶಸ್ವಿಗೊಳಿಸುವ ದಿಸೆಯಲ್ಲಿ ಸಿದ್ಧತಾ ಕಾರ್ಯಗಳಲ್ಲಿ ನಿರತವಾಗಿವೆ ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಚಂದ್ರಶೇಖರ ಪಾಟೀಲ ಗಾದಗಿ, ರಾಷ್ಟ್ರೀಯ ಬಸವ ದಳದ ರಾಷ್ಟ್ರೀಯ ಅಧ್ಯಕ್ಷ ಬಸವರಾಜ ಧನ್ನೂರ, ರಾಜ್ಯ ಘಟಕದ ಉಪಾಧ್ಯಕ್ಷ ರಾಜೇಂದ್ರ ಜೊನ್ನಿಕೇರಿ, ಜಿಲ್ಲಾ ಲಿಂಗಾಯತ ಸಮಾಜದ ಅಧ್ಯಕ್ಷ ಕುಶಾಲರಾವ್ ಪಾಟೀಲ ಖಾಜಾಪುರ, ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಉಪಾಧ್ಯಕ್ಷ ಶಿವಶರಣಪ್ಪ ಪಾಟೀಲ ಹಾರೂರಗೇರಿ, ಮುಖಂಡರಾದ ಶಿವರಾಜ ಪಾಟೀಲ ಅತಿವಾಳ, ಅಶೋಕ ಶೀಲವಂತ, ಯೋಗೇಂದ್ರ ಯದಲಾಪುರೆ, ರವಿ ಪಾಪಡೆ, ಸಿದ್ದು ಶೆಟಕಾರ್, ನಾಗಶೆಟ್ಟಿ ಶೆಟಕಾರ್, ಪ್ರಕಾಶ ಸಾವಳಗಿ, ನಂದು ಪಾಟೀಲ, ಸುರೇಶ ಹಳೆಂಬರ್, ಪ್ರಕಾಶ ಮುದ್ದಾ, ವಿಶಾಲ್ ಪಾಟೀಲ, ಆನಂದ ಪಾಟೀಲ, ರಾಜಕುಮಾರ ಕಮಠಾಣೆ, ಸಂಜುಕುಮಾರ ಪಾಟೀಲ, ಮಲ್ಲಿಕಾರ್ಜುನ ಪಂಚಾಕ್ಷರಿ ಮತ್ತಿತರರು ಇದ್ದರು. ವಿವೇಕ ಪಟ್ನೆ ಸ್ವಾಗತಿಸಿದರು. ರಾಷ್ಟ್ರೀಯ ಬಸವ ದಳದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸುರೇಶ ಸ್ವಾಮಿ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.