ADVERTISEMENT

ಗುರುಮಹಾಂತ ಶ್ರೀ, ಶಿವಾನಂದ ಶ್ರೀಗಳಿಗೆ ‘ಬಸವಭಾನು ಪ್ರಶಸ್ತಿ’

ಹಾರಕೂಡ ಮಠದಲ್ಲಿ ಡಿ.24ರಂದು ನಡೆಯುವ 74ನೇ ಜಾತ್ರೆಯಲ್ಲಿ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2025, 5:45 IST
Last Updated 8 ಡಿಸೆಂಬರ್ 2025, 5:45 IST
ಗುರುಮಹಾಂತ ಸ್ವಾಮೀಜಿ
ಗುರುಮಹಾಂತ ಸ್ವಾಮೀಜಿ   

ಬಸವಕಲ್ಯಾಣ: ತಾಲ್ಲೂಕಿನ ಹಾರಕೂಡ ಹಿರೇಮಠದಲ್ಲಿ ಡಿ. 24ರಂದು ಹಮ್ಮಿಕೊಂಡಿರುವ 74ನೇ ಜಾತ್ರಾ ಮಹೋತ್ಸವದಲ್ಲಿ ಇಲಕಲ್ ಗುರುಮಹಾಂತ ಸ್ವಾಮೀಜಿ ಹಾಗೂ ಹುಲಸೂರ ಶಿವಾನಂದ ಸ್ವಾಮೀಜಿ ಅವರಿಗೆ ‘ಬಸವ ಭಾನು’ ಪ್ರಶಸ್ತಿ ನೀಡಲಾಗುತ್ತದೆ ಎಂದು ಚನ್ನವೀರ ಶಿವಾಚಾರ್ಯರು ತಿಳಿಸಿದ್ದಾರೆ.

ಸದ್ಗುರು ಚನ್ನಬಸವ ಶಿವಯೋಗಿಗಳ ಪುಣ್ಯಸ್ಮರಣೆ ಅಂಗವಾಗಿ ಮೂರು ದಿನ ಜಾತ್ರೆ ನಡೆಯಲಿದೆ. ಡಿ. 24ರಂದು 6 ಗಂಟೆಗೆ ರಥೋತ್ಸವ ಜರುಗುವುದು. ಬಳಿಕ 7 ಗಂಟೆಗೆ ಶಿವಾನುಭವ ಚಿಂತನಗೋಷ್ಠಿ ಆಯೋಜಿಸಲಾಗುತ್ತದೆ. ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಪೌರಾಡಳಿತ ಸಚಿವ ರಹೀಂಖಾನ್, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ.ಅಜಯಸಿಂಗ್, ಶಾಸಕ ಶರಣು ಸಲಗರ ಬಸವಕಲ್ಯಾಣ, ಹುಮನಾಬಾದ್ ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ಕಲಬುರಗಿ ಗ್ರಾಮೀಣ ಶಾಸಕ ಬಸವರಾಜ ಮತ್ತಿಮಡು ಅತಿಥಿಗಳಾಗಿ ಭಾಗವಹಿಸುವರು.

ADVERTISEMENT

ವಿಧಾನ ಪರಿಷತ್ ಸದಸ್ಯರಾದ ಎಂ.ಜಿ.ಮುಳೆ, ಡಾ.ಚಂದ್ರಶೇಖರ ಪಾಟೀಲ, ಭೀಮರಾವ ಪಾಟೀಲ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಾಲಾ ನಾರಾಯಣರಾವ, ಕೃಷ್ಣಾ ಮೇಲ್ದಂಡೆ ಯೋಜನೆ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಬಾಬು ಹೊನ್ನಾನಾಯಕ, ಕೆಪಿಸಿಸಿ ಸಹಕಾರ ವಿಭಾಗದ ಅಧ್ಯಕ್ಷ ಧನರಾಜ ತಾಳಂಪಳ್ಳಿ, ಲೋಕೋಪಯೋಗಿ ಇಲಾಖೆ ಆಂತರಿಕ ಆರ್ಥಿಕ ಸಲಹೆಗಾರ ಸೋಮನಾಥ ಪಟ್ನೆ ಉಪಸ್ಥಿತರಿರುವರು.

ಡಿ.25ರಂದು ಮಧ್ಯಾಹ್ನ 2 ಗಂಟೆಗೆ ಜಂಗೀ ಪೈಲ್ವಾನರ ಕುಸ್ತಿ ಸ್ಪರ್ಧೆ ನಡೆಯಲಿದ್ದು ಆಳಂದ ಶಾಸಕ ಬಿ.ಅರ್.ಪಾಟೀಲ ಉದ್ಘಾಟಿಸುವರು. ಡಿಸೆಂಬರ್ 26 ರಂದು ಪಶು ಪ್ರದರ್ಶನ ಏರ್ಪಡಿಸಲಾಗಿದೆ ಎಂದು ಹೇಳಿದ್ದಾರೆ.

ಶಿವಾನಂದ ಸ್ವಾಮೀಜಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.