ಬಸವಕಲ್ಯಾಣ:`ಸರ್ಕಾರಿ ಶಾಲೆಗಳಲ್ಲಿನ ಮಕ್ಕಳ ದಾಖಲಾತಿ ಮತ್ತು ಪರೀಕ್ಷೆಗಳ ಶೇಕಡಾವಾರು ಫಲಿತಾಂಶ ಹೆಚ್ಚಾಗುವುದು ಅತ್ಯಂತ ಅಗತ್ಯವಾಗಿದೆ' ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದವೀರಯ್ಯ ರುದನೂರು ಹೇಳಿದ್ದಾರೆ.
ಸರ್ಕಾರಿ ಪ್ರೌಢಶಾಲೆಯಲ್ಲಿ ಗುರುವಾರ ಶಿಕ್ಷಣ ಇಲಾಖೆಯ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆಯ ’ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
`ಸರ್ಕಾರಿ ಶಾಲೆಯಲ್ಲಿ ಉನ್ನತ ಶಿಕ್ಷಣ ಪಡೆದಿರುವ ನುರಿತ ಶಿಕ್ಷಕರಿದ್ದಾರೆ. ಉತ್ತಮ ಸೌಲಭ್ಯಗಳಿವೆ. ಆದ್ದರಿಂದ ಗುಣಾತ್ಮಕ ಶಿಕ್ಷಣ ದೊರಕಬೇಕಾಗಿದೆ' ಎಂದರು.
ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸಂಜೀವಕುಮಾರ ಕಾಂಗೆ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಪ್ರಭಾಕರ ಕಳಮಾಸೆ, ಅಜೀಂ ಪ್ರೇಮಜಿ ಫೌಂಡೇಶನ್ ಜಿಲ್ಲಾ ನೋಡಲ್ ಅಧಿಕಾರಿ ಸಿದ್ರಾಮ ತೋಟೆ, ಮುಖ್ಯ ಶಿಕ್ಷಕಿ ಅನಿತಾ ಸಾವಳ್ಕರ್, ಸಂಪನ್ಮೂಲ ವ್ಯಕ್ತಿ ಗಿರಿಧರ ಧಾನೂರೆ ಮಾತನಾಡಿದರು.
ನೀಲಾಂಬಿಕಾ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಂಕರ ಮಾಲಿಬಿರಾದಾರ, ಶಿವಕುಮಾರ ಜಡಗೆ, ರಾಜೇಂದ್ರ ಟೀಳೆ, ಶುಕರುದ್ದೀನ್, ರಮೇಶ ಭಾತಂಬ್ರೆ, ಸಂಜೀವಕುಮಾರ ನಡುಕರ್, ನಾಸೀರ್ ಪಟೇಲ್, ಮಸ್ತಾನ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.