
ಬಸವಕಲ್ಯಾಣ: ‘ಕಲ್ಯಾಣ ನಾಡು ಗ್ರಾಮೀಣ ಜನಪದ ಕಲಾವೃಂದ ಸಂಘದಿಂದ ಫೆಬ್ರುವರಿ 14 ರಂದು 20ನೇ ವರ್ಷದ ಸಂಭ್ರಮದ ಅಂಗವಾಗಿ ಉತ್ಸವ ಹಾಗೂ ಸಂಗೀತ ಸೌರಭ ಕಾರ್ಯಕ್ರಮವನ್ನು ನಗರದ ತ್ರಿಪುರಾಂತ ಗವಿಮಠದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಸಂಘದ ಕಾರ್ಯದರ್ಶಿ ವೀರಶೆಟ್ಟಿ ಮಲಶೆಟ್ಟಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಉದ್ಘಾಟಿಸುವರು. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಶಿವಪ್ರಸಾದ ಗೊಲ್ಲಹಳ್ಳಿ ಅಧ್ಯಕ್ಷತೆ ವಹಿಸುವರು. ಅಭಿನವ ಘನಲಿಂಗ ರುದ್ರಮುನಿ ಶಿವಾಚಾರ್ಯರು ನೇತೃತ್ವ, ಶಾಸಕ ಶರಣು ಸಲಗರ ಉಪಸ್ಥಿತರಿರಲಿದ್ದಾರೆ’ ಎಂದು ತಿಳಿಸಿದರು.
‘ಸುಗಮ ಸಂಗೀತ, ಹಿಂದೂಸ್ತಾನಿ ಸಂಗೀತ, ಕಥಾ ಕೀರ್ತನೆ, ಜಾನಪದ ಹಾಡುಗಾರಿಕೆ, ತತ್ವಪದ ಗಾಯನ, ವಚನ ಸಂಗೀತ, ಗೀಗೀ ಪದ ಹಾಡಲಾಗುತ್ತದೆ. ಸಂಗೀತ ಸಾಧಕರ, ಗಣ್ಯರ, ಜನಪದ ಕಲಾವಿದರ ಸನ್ಮಾನ ನಡೆಯಲಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.