ADVERTISEMENT

ಬಸವೇಶ್ವರ ಮೂರ್ತಿ ಕೊಡುಗೆ: ಭರವಸೆ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2022, 14:04 IST
Last Updated 7 ಸೆಪ್ಟೆಂಬರ್ 2022, 14:04 IST
ಚಿಟಗುಪ್ಪ ತಾಲ್ಲೂಕಿನ ಮಾಡಗೂಳ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಅವರನ್ನು ವೀರಶೈವ ಲಿಂಗಾಯತ ಮಹಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು
ಚಿಟಗುಪ್ಪ ತಾಲ್ಲೂಕಿನ ಮಾಡಗೂಳ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ಹುಮನಾಬಾದ್ ಶಾಸಕ ರಾಜಶೇಖರ ಪಾಟೀಲ ಅವರನ್ನು ವೀರಶೈವ ಲಿಂಗಾಯತ ಮಹಾ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು   

ಬೀದರ್: ಚಿಟಗುಪ್ಪ ತಾಲ್ಲೂಕಿನ ಮಾಡಗೂಳ ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪಕ್ಕೆ ಬಸವೇಶ್ವರ ಮೂರ್ತಿ ಕೊಡುಗೆಯಾಗಿ ನೀಡಲಾಗುವುದು ಎಂದು ಶಾಸಕ ರಾಜಶೇಖರ ಪಾಟೀಲ ಭರವಸೆ ನೀಡಿದರು.
ಗ್ರಾಮದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ವೀರಶೈವ ಲಿಂಗಾಯತ ಮಹಾ ವೇದಿಕೆ ವತಿಯಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವೇದಿಕೆಯ ಚಿಟಗುಪ್ಪ ತಾಲ್ಲೂಕು ಘಟಕದ ಅಧ್ಯಕ್ಷ ನಾಗೇಶ ಬಾವಗಿ, ಯುವ ಘಟಕದ ಮಾಡಗೂಳ ಗ್ರಾಮ ಘಟಕದ ಅಧ್ಯಕ್ಷ ಬಸವರಾಜ ಪಾಟೀಲ, ಉಪಾಧ್ಯಕ್ಷ ಮಡಿವಾಳ ದೇವಣಿ, ಗ್ರಾಮ ಪಂಚಾಯಿತಿ ಸದಸ್ಯರು, ಗ್ರಾಮದ ಗಣ್ಯರು ಇದ್ದರು.
ಪ್ರತಿ ಗ್ರಾಮಗಳಲ್ಲಿ ಮೂರ್ತಿ: ವೀರಶೈವ ಲಿಂಗಾಯತ ಮಹಾ ವೇದಿಕೆಯು ಬರುವ ದಿನಗಳಲ್ಲಿ ಜಿಲ್ಲೆಯ ಪ್ರತಿ ಗ್ರಾಮಗಳಲ್ಲೂ ಬಸವೇಶ್ವರ ಮೂರ್ತಿ ಸ್ಥಾಪನೆಗೆ ಶ್ರಮಿಸಲಿದೆ ಎಂದು ವೀರಶೈವ ಲಿಂಗಾಯತ ಮಹಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಅಂಬರೀಷ್ ಬಟನಾಪುರೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.