ADVERTISEMENT

ಗುತ್ತಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಆರಂಭ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:52 IST
Last Updated 24 ಸೆಪ್ಟೆಂಬರ್ 2020, 14:52 IST
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್‍ನ ಬ್ರಿಮ್ಸ್ ಬೋಧಕ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೀದರ್‍ನ ಬ್ರಿಮ್ಸ್ ಬೋಧಕ ಆಸ್ಪತ್ರೆ ಎದುರು ಗುರುವಾರ ಪ್ರತಿಭಟನೆ ನಡೆಸಿದರು   

ಬೀದರ್: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ಗುರುವಾರದಿಂದ ಅರ್ನಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ.

ಇಲ್ಲಿಯ ಬ್ರಿಮ್ಸ್ ಬೋಧಕ ಆಸ್ಪತ್ರೆ ಆವರಣದಲ್ಲಿ ಸೇರಿದ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಆರೋಗ್ಯ ಕ್ಷೇತ್ರಕ್ಕೆ ಬಜೆಟ್‍ನಲ್ಲಿ ಅನುದಾನ ಹೆಚ್ಚಿಸಬೇಕು. ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಸೇವಾ ಭದ್ರತೆ ಕಲ್ಪಿಸಬೇಕು. ಏಕರೂಪದ ವೇತನ ಜಾರಿಗೊಳಿಸಬೇಕು. ನೇರವಾಗಿ ಇಲಾಖೆಯಿಂದ ವೇತನ ಪಾವತಿಸಬೇಕು. ಆರೋಗ್ಯ ಭಾಗ್ಯ ಯೋಜನೆಯನ್ನು ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರಿಗೂ ವಿಸ್ತರಿಸಬೇಕು ಎಂದು ಬೇಡಿಕೆ ಮಂಡಿಸಿದರು.

ADVERTISEMENT

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಎಂ.ಎಸ್. ಶಿರೋಮಣಿ, ಅಧ್ಯಕ್ಷೆ ಸವಿತಾ ಸುದೇಶ, ಚಿತ್ರಾ ಗಾಯಕವಾಡ, ಸುಧಾಮಣಿ ಗುಪ್ತಾ, ಕವಿತಾ ದತ್ತು, ಕಾವೇರಿ ರಾಜಕುಮಾರ, ನಿರ್ಮಲಾ ಸತ್ಯನಾರಾಯಣ, ಸಾರಿಕಾ ಉಮೇಶ, ಜ್ಯೋತಿ ರವೀಂದ್ರ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.