
ಪ್ರಜಾವಾಣಿ ವಾರ್ತೆ
ಸಾವು
(ಪ್ರಾತಿನಿಧಿಕ ಚಿತ್ರ)
ಬೀದರ್: ತಾಲ್ಲೂಕಿನ ಇಸ್ಲಾಂಪುರ ಸಮೀಪದ ಸೇತುವೆ ಕೆಳಗೆ ರುಂಡ ಬೇರ್ಪಟ್ಟ, ತಂತಿಯಿಂದ ಕೈಕಾಲುಗಳನ್ನು ಕಟ್ಟಿ ಹಾಕಲಾಗಿದ್ದ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.
‘ಬುಧವಾರ ರಾತ್ರಿ ದುಷ್ಕರ್ಮಿಗಳು ವ್ಯಕ್ತಿಯನ್ನು ಕೊಂದು ರುಂಡ ಹಾಗೂ ಮುಂಡವನ್ನು ಬೇರೆ ಬೇರೆ ಮಾಡಿ ಬೀಸಾಡಿ ಹೋಗಿದ್ದಾರೆ. ಈ ಕುರಿತು ಜನವಾಡ ಪೊಲೀಸ್ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.