
ಬೀದರ್: 2025-26ನೇ ಸಾಲಿನ ರಾಜ್ಯ ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಟೇಬಲ್ ಟೆನಿಸ್ ಪಂದ್ಯಾವಳಿಯ ಬಾಲಕ ಮತ್ತು ಬಾಲಕಿಯರ ವಿಭಾಗದ ಫೈನಲ್‌ನಲ್ಲಿ ಬೆಂಗಳೂರು ದಕ್ಷಿಣ ತಂಡಗಳು ಅಮೋಘ ಪ್ರದರ್ಶನ ನೀಡುವ ಮೂಲಕ ಟ್ರೋಫಿಯನ್ನು ಮುಡಿಗೇರಿಸಿಕೊಂಡವು.
ಬಾಲಕರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ತಂಡವು 3–0 ನೇರ ಸೆಟ್‌ಗಳಿಂದ ಮೈಸೂರು ತಂಡವನ್ನು ಸೋಲಿಸಿತು. ಬೆಂಗಳೂರು ದಕ್ಷಿಣ ತಂಡವನ್ನು ಅಭಿನವ್, ಗೌರವ್ ಹಾಗೂ ವಿಭವ್ ಪ್ರತಿನಿಧಿಸಿದರೆ, ಮೈಸೂರು ತಂಡವನ್ನು ಮಂಜು, ಸೋನಿತ್ ಹಾಗೂ ಪಾರ್ಥ ಜಿ. ಪ್ರತಿನಿಧಿಸಿದ್ದರು.
ಇನ್ನು, ಬಾಲಕಿಯರ ವಿಭಾಗದಲ್ಲಿ ಬೆಂಗಳೂರು ದಕ್ಷಿಣ ತಂಡವು, ಬೆಳಗಾವಿ ತಂಡವನ್ನು ಮಣಿಸಿತು. ವಿಜೇತ ತಂಡಗಳಿಗೆ ಟ್ರೋಫಿ ಪ್ರದಾನ ಮಾಡಲಾಯಿತು. ಪಂದ್ಯಾವಳಿಯಲ್ಲಿ ರಾಜ್ಯದ 33 ಶೈಕ್ಷಣಿಕ ಜಿಲ್ಲೆಗಳ ವಿದ್ಯಾರ್ಥಿಗಳು ಮತ್ತು 26 ಜಿಲ್ಲೆಗಳ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಗುರುವಾರ ಕ್ವಾಲಿಫೈಯರ್, ಕ್ವಾರ್ಟರ್ ಫೈನಲ್ ಪಂದ್ಯಗಳು ನಡೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.