ADVERTISEMENT

ಶ್ರೀದೇವಿ ಪಾಟೀಲಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2022, 12:44 IST
Last Updated 30 ಸೆಪ್ಟೆಂಬರ್ 2022, 12:44 IST
ಬೀದರ್‌ನ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀದೇವಿ ವಿ. ಪಾಟೀಲ (ಎಡದಿಂದ ಕೊನೆಯವರು) ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು
ಬೀದರ್‌ನ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಹ ಶಿಕ್ಷಕಿ ಶ್ರೀದೇವಿ ವಿ. ಪಾಟೀಲ (ಎಡದಿಂದ ಕೊನೆಯವರು) ಅವರಿಗೆ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ ಮಾಡಲಾಯಿತು   

ಬೀದರ್: ತಾಲ್ಲೂಕಿನ ಕಮಠಾಣ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕನ್ನಡ ಸಹ ಶಿಕ್ಷಕಿ ಶ್ರೀದೇವಿ ವಿ. ಪಾಟೀಲ ಅವರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನೀಡಲಾಗುವ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ದೊರಕಿದೆ.

ಇಲ್ಲಿಯ ಪ್ರತಾಪನಗರದ ರಾಜ್ಯ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪುರೆ ಪ್ರಶಸ್ತಿ ಪತ್ರ, ಫಲಕ ಹಾಗೂ ₹ 5 ಸಾವಿರ ಚೆಕ್ ಪ್ರದಾನ ಮಾಡಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಪ್ರತಿ ವರ್ಷ ಕಮಠಾಣ ಶಾಲೆಯ ಅನೇಕ ವಿದ್ಯಾರ್ಥಿಗಳು ಕನ್ನಡ ವಿಷಯದಲ್ಲಿ 125ಕ್ಕೆ 125 ಅಂಕ ಪಡೆಯುತ್ತಿರುವುದು ಅವರ ಬೋಧನಾ ಕೌಶಲಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಶಿಕ್ಷಕ ವೃತ್ತಿ ಜತೆಗೆ ಸಮಾಜ ಪರ ಚಿಂತಕಿ, ಸಾಹಿತಿಯೂ ಆಗಿದ್ದಾರೆ. ಅವರು ‘ಬದುಕಿನ ಸಾರ್ಥಕತೆ’ ಕೃತಿಯನ್ನೂ ರಚಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.