ADVERTISEMENT

ಭಗೀರಥ ಜಯಂತಿ ಆಚರಣೆ

​ಪ್ರಜಾವಾಣಿ ವಾರ್ತೆ
Published 11 ಮೇ 2019, 11:42 IST
Last Updated 11 ಮೇ 2019, 11:42 IST
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಉದ್ಘಾಟಿಸಿದರು
ಬೀದರ್‌ನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಭಗೀರಥ ಜಯಂತಿ ಆಚರಣೆ ಕಾರ್ಯಕ್ರಮವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಉದ್ಘಾಟಿಸಿದರು   

ಬೀದರ್: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಭಗೀರಥ ಜಯಂತಿ ಆಚರಿಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಗಾಳಿ ಹಾಗೂ ಬೀದರ್ ಉಪ ವಿಭಾಗಾಧಿಕಾರಿ ಶಂಕರ ವಣಕ್ಯಾಳ ಅವರು ಭಗೀರಥನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ರಾಜಶೇಖರ ವಟಗೆ, ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು. ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ಪ್ರಯುಕ್ತ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.