ADVERTISEMENT

ನನ್ನ ಮೇಲಿನ ಆರೋಪಕ್ಕೆ ಸಂತ್ರಸ್ತ ಯುವತಿ ಉತ್ತರ: ಮಾಜಿ ಸಚಿವ ಭಗವಂತ ಖೂಬಾ

​ಪ್ರಜಾವಾಣಿ ವಾರ್ತೆ
Published 27 ಜುಲೈ 2025, 11:40 IST
Last Updated 27 ಜುಲೈ 2025, 11:40 IST
<div class="paragraphs"><p>ಭಗವಂತ ಖೂಬಾ</p></div>

ಭಗವಂತ ಖೂಬಾ

   

ಬೀದರ್‌: 'ನನ್ನ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಸಂತ್ರಸ್ತ ಯುವತಿ ಉತ್ತರ ನೀಡಿದ್ದಾರೆ. ನನ್ನ ವಿರುದ್ಧದ ಆರೋಪ ಎಷ್ಟು ಗಂಭೀರವಾಗಿದೆ ಎನ್ನುವುದು ಜನರಿಗೂ ಗೊತ್ತಿದೆ' ಎಂದು ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ ಪ್ರತಿಕ್ರಿಯಿಸಿದರು.

'ಮಹಾರಾಷ್ಟ್ರದ ಸಂತ್ರಸ್ತ ಯುವತಿ ಹಾಗೂ ಕುಟುಂಬದವರನ್ನು ಭಗವಂತ ಖೂಬಾ ಎತ್ತಿ ಕಟ್ಟಿ ಕುತಂತ್ರ ಮಾಡುತ್ತಿದ್ದಾರೆ ಎಂದು ಸ್ವಪಕ್ಷೀಯ ಶಾಸಕ ಪ್ರಭು ಚವಾಣ್ ಆರೋಪ ಮಾಡಿದ್ದಾರಲ್ಲ' ಎಂಬ ಪತ್ರಕರ್ತರ ಪ್ರಶ್ನೆಗೆ ಮೇಲಿನಂತೆ ಉತ್ತರಿಸಿದರು.

ADVERTISEMENT

ವ್ಯಕ್ತಿತ್ವದ ಅರ್ಹತೆ ಇದ್ದರೆ ಜನ ಅದನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಾರೆ ಎಂದು ಪ್ರಭು ಚವಾಣ್ ಅವರ ಹೆಸರು ಪ್ರಸ್ತಾಪಿಸದೆ ಕುಟುಕಿದರು.

ಪ್ರಭು ಚವಾಣ್ ಹೇಳಿದ್ದೇನು?

ನನ್ನನ್ನು ಮುಗಿಸಬೇಕೆಂಬ ಒಂದೇ ಉದ್ದೇಶದಿಂದ ಕೇಂದ್ರದ ಮಾಜಿ ಸಚಿವ, ಬಿಜೆಪಿ ಮುಖಂಡ ಭಗವಂತ ಖೂಬಾ‌ ಅವರು ನನ್ನ ವಿರುದ್ಧ ಹುನ್ನಾರ ನಡೆಸುತ್ತಿದ್ದಾರೆ. ಅವರ ಕುತಂತ್ರದಿಂದಲೇ ನನ್ನ ಹಾಗೂ ನಮ್ಮ ಕುಟುಂಬ ಸದಸ್ಯರ ವಿರುದ್ಧ ಮಹಿಳಾ‌ ಆಯೋಗಕ್ಕೆ ದೂರು ಕೊಡಲಾಗಿದೆ' ಎಂದು ಔರಾದ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಪ್ರಭು ಚವಾಣ್ ಗಂಭೀರ ಆರೋಪ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.