ಭಾಲ್ಕಿ: ಮುಂಗಾರು ಮತ್ತು ಹಿಂಗಾರು ಮಳೆ ಅಭಾವದ ಕಾರಣ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಕುಡಿಯುವ ನೀರು ಅನಾವಶ್ಯಕವಾಗಿ ವ್ಯಯ ಮಾಡದೆ ಹಿತಮಿತವಾಗಿ ಬಳಸಬೇಕು ಎಂದು ಶಾಸಕ ಈಶ್ವರ ಖಂಡ್ರೆ ಸಲಹೆ ನೀಡಿದರು.
ಇಲ್ಲಿನ ಉಪನ್ಯಾಸಕರ ಬಡಾವಣೆಯಲ್ಲಿರುವ ಮೌನೇಶ್ವರ ಮಂದಿರ ಹತ್ತಿರ ಕುಡಿಯುವ ನೀರಿಗಾಗಿ ಕೊರೆಸಿದ ಕೊಳವೆ ಬಾವಿಗೆ ಚಾಲನೆ ನೀಡಿ ಮಾತನಾಡಿದರು.
ಮಹಾಮಾರಿ ಕೊರೊನಾ ಹಾವಳಿಯ ಮಧ್ಯೆಯೂ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿ ಎದುರಾಗುತ್ತಿದೆ. ಇಲ್ಲಿನ ಸಾರ್ವಜನಿಕರ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ಕಾರಂಜಾ ಜಲಾಶಯದಿಂದ ನೇರ ಪೈಪ್‍ಲೈನ್ ಅಳವಡಿಸಲಾಗುತ್ತಿದೆ. ನೀರು ತೆಗೆದುಕೊಳ್ಳುವಾಗ ಮಾಸ್ಕ್ ಧರಿಸಿಕೊಂಡು, ಅಂತರ ಕಾಪಾಡಬೇಕು ಎಂದು ಹೇಳಿದರು.
ಪುರಸಭೆ ಸದಸ್ಯ ರಾಹುಲ್ ಪೂಜಾರಿ, ಅರ್ಬನ್ ಬ್ಯಾಂಕ್ ನಿರ್ದೇಶಕ ಚಂದ್ರಶೇಖರ ವಂಕೆ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.