ADVERTISEMENT

ಭಾಲ್ಕಿ| ಬಸವಣ್ಣನವರ ಹೆಸರಿನ ಉದ್ಯಾನ ನಿರ್ಮಾಣಕ್ಕೆ ಅನುಮೋದನೆ: ಖಂಡ್ರೆಗೆ ಸನ್ಮಾನ

​ಪ್ರಜಾವಾಣಿ ವಾರ್ತೆ
Published 11 ಜನವರಿ 2026, 5:09 IST
Last Updated 11 ಜನವರಿ 2026, 5:09 IST
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಹಿರೇಮಠದಲ್ಲಿ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿದರು
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರನ್ನು ಹಿರೇಮಠದಲ್ಲಿ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿದರು   

ಭಾಲ್ಕಿ: ಬೆಂಗಳೂರಿನ ಯಲಹಂಕದಲ್ಲಿ ವಿಶ್ವಗುರು ಬಸವಣ್ಣನವರ ಹೆಸರಿನ ಜೀವವೈವಿಧ್ಯ ಉದ್ಯಾನ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಅನುಮೋದನೆ ಕೊಡಿಸಿದ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರನ್ನು ಪಟ್ಟಣದ ಹಿರೇಮಠದಲ್ಲಿ ಹಿರಿಯ ಸ್ವಾಮೀಜಿ ಬಸವಲಿಂಗ ಪಟ್ಟದ್ದೇವರು, ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಸನ್ಮಾನಿಸಿದರು.

ವಿಶ್ವಕ್ಕೆ ಸಮಾನತೆ ಸಾರಿದ ವಿಶ್ವಗುರು ಬಸವಣ್ಣನವರ ಹೆಸರಿನಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನ 153 ಎಕರೆ ಪ್ರದೇಶದಲ್ಲಿ ಉದ್ಯಾನ ನಿರ್ಮಾಣಕ್ಕೆ ಸರ್ಕಾರ ಮುಂದಾಗಿರುವುದು ಸಂತಸ ತರಿಸಿದೆ ಎಂದು ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು ಹೇಳಿದರು.

ಗಡಿಭಾಗದಲ್ಲಿ ಪಟ್ಟದ್ದೇವರಿಂದ ದಣಿವರಿಯದ ಸೇವೆ: ಗಡಿಭಾಗದಲ್ಲಿ ಬಸವಲಿಂಗ ಪಟ್ಟದ್ದೇವರು ವಿವಿಧ ಕ್ಷೇತ್ರಗಳಲ್ಲಿ ಅವಿಶ್ರಾಂತವಾಗಿ ಸೇವೆ ಸಲ್ಲಿಸುತ್ತ ವಿಶಿಷ್ಟ ಛಾಪು ಮೂಡಿಸುತ್ತಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು.

ADVERTISEMENT

ಪಟ್ಟಣದ ಹಿರೇಮಠ ಸಂಸ್ಥಾನದಲ್ಲಿ ಕರಡ್ಯಾಳ ಚನ್ನಬಸವೇಶ್ವರ ಗುರುಕುಲ ಪ್ರಾಯೋಜಕತ್ವದಲ್ಲಿ ಬಸವಲಿಂಗ ಪಟ್ಟದ್ದೇವರು ಅಮೃತ ಮಹೋತ್ಸವ ಸಮಿತಿ ವತಿಯಿಂದ ಶನಿವಾರ ಆಯೋಜಿಸಿದ್ದ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಿತಿ 2026ರ ದಿನದರ್ಶಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ, ಕಲಬುರಗಿ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶರಣು ಮೋದಿ, ವೀರಶೈವ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಸಂತೋಷ, ಪುರಸಭೆ ಮಾಜಿ ಅಧ್ಯಕ್ಷ ಬಸವರಾಜ ವಂಕೆ, ಉಪಾಧ್ಯಕ್ಷ ವಿಜಯಕುಮಾರ ರಾಜಭವನ, ಧನರಾಜ ಬಂಬುಳಗೆ, ರಾಜು ಜುಬರೆ, ಬಾಬು ಬೆಲ್ದಾಳ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.