ಭಾಲ್ಕಿ: ಭಾಟಸಾಂಗವಿ ಮತ್ತು ನಾರದ ಸಂಗಮ ನಡುವೆ ಹರಿಯುವ ಮಾಂಜ್ರಾ ನದಿಯಲ್ಲಿ ಕೊಚ್ಚಿ ಹೋಗಿದ್ದ ನಾಮದೇವ ಭೀಮರಾವ್ ಝಳಕೆ (65) ಅವರ ಶವ ಶನಿವಾರ ಪತ್ತೆಯಾಗಿದೆ.
ತಾಲ್ಲೂಕಿನ ಗಡಿಭಾಗದ ಭಾಟಸಾಂಗವಿ ಗ್ರಾಮದ ನಾಮದೇವ ಅವರು ಗುರುವಾರ ಮಾಂಜ್ರಾನದಿಯಲ್ಲಿ ಏಕಾಏಕಿ ಹರಿವು ಹೆಚ್ಚಾಗಿದ್ದರಿಂದ ಕೊಚ್ಚಿ ಹೋಗಿದ್ದರು.
ಅವರ ಪತ್ತೆಗಾಗಿ ಅಗ್ನಿಶಾಮಕ ಸಿಬ್ಬಂದಿ ಅಗ್ನಿಶಾಮಕ ಸಿಬ್ಬಂದಿ ಗುರುವಾರದಿಂದಲೇ ಶೋಧ ಆರಂಬಿಸಿದ್ದರು. 36 ಗಂಟೆಗಳ ಶೋಧ ಕಾರ್ಯದ ನಂತರ ನದಿಯಲ್ಲಿ ಕೊಚ್ಚಿ ಹೋಗಿದ್ದ ನಾಮದೇವ ಅವರ ದೇಹ ಪತ್ತೆಯಾಗಿದೆ.
‘ಕೊಚ್ಚಿಕೊಂಡು ಹೋದ ಸ್ಥಳದಿಂದ ಸುಮಾರು 3 ಕಿ.ಮೀ ದೂರದಲ್ಲಿ ವ್ಯಕ್ತಿಯ ಮೃತ ದೇಹ ಪತ್ತೆಯಾಗಿದೆ’ ಎಂದು ತಹಶೀಲ್ದಾರ್ ಮಲ್ಲಿಕಾರ್ಜುನ ವಡ್ಡನಕೇರಿ ತಿಳಿಸಿದರು.
ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.