ADVERTISEMENT

ಭಾಲ್ಕಿ: ಕಾಂಗ್ರೆಸ್ ಮುಖಂಡ ಶಿವಕುಮಾರ ದೇಶಮುಖ ನಿಧನ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2022, 5:40 IST
Last Updated 20 ಮಾರ್ಚ್ 2022, 5:40 IST
ಶಿವಕುಮಾರ ದೇಶಮುಖ
ಶಿವಕುಮಾರ ದೇಶಮುಖ   

ಭಾಲ್ಕಿ: ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಕಾಂಗ್ರೆಸ್ ಮುಖಂಡ ಬಾಳೂರ ಗ್ರಾಮದ ಶಿವಕುಮಾರ ದೇಶಮುಖ (58) ಶನಿವಾರ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಹೆಂಡತಿ, ಒಬ್ಬ ಪುತ್ರ ಹಾಗೂ ಮೂವರು ಪುತ್ರಿಯರು ಇದ್ದಾರೆ. ಮೃತರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ 11 ಗಂಟೆಗೆ ಸ್ವಗ್ರಾಮ ಬಾಳೂರದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಪಕ್ಷಕ್ಕೆ ತುಂಬಲಾರದ ನಷ್ಟ: ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಶಿವಕುಮಾರ ನೀಲಕಂಠರಾವ್‌ ದೇಶಮುಖ ನಿಧನದಿಂದ ವೈಯಕ್ತಿಕವಾಗಿ ಮತ್ತು ಪಕ್ಷಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಶಾಸಕ ಈಶ್ವರ ಖಂಡ್ರೆ ಹೇಳಿದ್ದಾರೆ. ದೇಶಮುಖ ಅವರು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಆಗಿದ್ದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಜತೆಗೆ ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷ ಸೇರಿ ವಿವಿಧ ಹುದ್ದೆಗಳನ್ನು ಸಮರ್ಥವಾಗಿ ನಿಭಾಯಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT