
ಭಾಲ್ಕಿ: ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಸಿದ್ಧರಾಮೇಶ್ವರ 13ನೇ ಜಾತ್ರಾ ಮಹೋತ್ಸವ ಜ.11 ರಂದು ಸಮಾರೋಪಗೊಳ್ಳಲಿದೆ.
ಅಂದು ಬೆಳಿಗ್ಗೆ 8ಕ್ಕೆ ರಾಚೋಟೇಶ್ವರ ಕತೃ ಗದ್ದುಗೆಗೆ ಮಹಾ ರುದ್ರಾಭಿಷೇಕ, ಬೆಳಿಗ್ಗೆ 10.30ಕ್ಕೆ ಗ್ರಾಮದ ಜ್ಯಾಂತಿ ಪೆಟ್ರೋಲ್ ಬಂಕ್ ಬಳಿಯಿಂದ ಮಠದ ವರೆಗೆ ಸಾರೋಟಿನಲ್ಲಿ ಹಾಸನ ಜಿಲ್ಲೆಯ ಅರಸಿಕೆರೆ ತಾಲ್ಲೂಕಿನ ಹಾರನಹಳ್ಳಿಯ ಕೋಡಿಮಠ ಮಹಾ ಸಂಸ್ಥಾನದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ, ಜೈ ಭಾರತ ಮಾತಾ ರಾಷ್ಟ್ರೀಯ ಸೇವಾ ಸಮಿತಿಯ ರಾಷ್ಟ್ರೀಯ ಅಧ್ಯಕ್ಷ ಹವಾ ಮಲ್ಲಿನಾಥ ಮಹಾರಾಜ ಹಾಗೂ ಹುಲಸೂರಿನ ಶಿವಾನಂದ ಸ್ವಾಮೀಜಿ ಅವರ ಭವ್ಯ ಮೆರವಣಿಗೆ ನಡೆಯಲಿದೆ ಎಂದು ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ತಿಳಿಸಿದ್ದಾರೆ.
ಮಧ್ಯಾಹ್ನ 1ಕ್ಕೆ ಜಾತ್ರೆ ಸಮಾರೋಪ ಹಾಗೂ ಧರ್ಮಸಭೆ ಜರುಗಲಿದೆ. ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸುವರು. ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನೇತೃತ್ವ ವಹಿಸಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.