ADVERTISEMENT

ಭಾಲ್ಕಿ: ಕೃಷ್ಣ-ರಾಧೆಯರ ವೇಷತೊಟ್ಟು ಸಂಭ್ರಮಿಸಿದ ಚಿಣ್ಣರು

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2024, 13:55 IST
Last Updated 24 ಆಗಸ್ಟ್ 2024, 13:55 IST
ಭಾಲ್ಕಿಯ ಅಥರ್ವ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಕೃಷ್ಣ- ರಾಧೆಯರ ವೇಷತೊಟ್ಟು ಸಂಭ್ರಮಿಸಿದರು
ಭಾಲ್ಕಿಯ ಅಥರ್ವ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳು ಕೃಷ್ಣ- ರಾಧೆಯರ ವೇಷತೊಟ್ಟು ಸಂಭ್ರಮಿಸಿದರು   

ಭಾಲ್ಕಿ: ಪಟ್ಟಣದ ಅಥರ್ವ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಮಕ್ಕಳು ರಾಧೆ, ಕೃಷ್ಣನ ವೇಷ ತೊಟ್ಟು ಸಂಭ್ರಮಿಸಿದರು.

ರಾಧಾ-ಕೃಷ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ, ಕೃಷ್ಣ ಜನ್ಮಾಷ್ಟಮಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು. ಶಾಲೆಯ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ರಾಧಾ ಕೃಷ್ಣರ ವೇಷ ತೊಟ್ಟು, ಶ್ರೀಕೃಷ್ಣರ ಹಾಡುಗಳಿಗೆ ಹೆಜ್ಜೆಹಾಕಿ ಕುಣಿದು ಕುಪ್ಪಳಿಸಿದರು. ಪುಟಾಣಿ ಮಕ್ಕಳು ಚಾಕಲೇಟ್ ತುಂಬಿದ ಮೊಸರು ಗಡಿಗೆ ಒಡೆದು ಸಂಭ್ರಮಿಸಿದರು.

ಶಾಲೆಯ ಮುಖ್ಯಸ್ಥೆ ಶೃತಿ ಬಸವರಾಜ ಬಿರಾದಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ನಿವೃತ್ತ ಮುಖ್ಯಶಿಕ್ಷಕ ಜಯರಾಜ ದಾಬಶೆಟ್ಟಿ ಮಾತನಾಡಿದರು.

ADVERTISEMENT

ಕೀರ್ತಿ ವಿಜಯಕುಮಾರ ಸೇರಿದಂತೆ ಶಾಲೆಯ ಶಿಕ್ಷಕಿಯರು ಮತ್ತು ಮಕ್ಕಳು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.