ADVERTISEMENT

ಭಾಲ್ಕಿ| ‘ನಮ್ಮೂರ ಜಾತ್ರೆ’ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 31 ಡಿಸೆಂಬರ್ 2025, 5:21 IST
Last Updated 31 ಡಿಸೆಂಬರ್ 2025, 5:21 IST
ಹಾವಗಿಲಿಂಗೇಶ್ವರ ಶಿವಾಚಾರ್ಯ
ಹಾವಗಿಲಿಂಗೇಶ್ವರ ಶಿವಾಚಾರ್ಯ   

ಭಾಲ್ಕಿ: ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಸಿದ್ಧರಾಮೇಶ್ವರ ‘ನಮ್ಮೂರ 13ನೇ ಜಾತ್ರಾ ಮಹೋತ್ಸವ’ ಜನವರಿ 1 ರಿಂದ 11 ರವರೆಗೆ ನಡೆಯಲಿದೆ. ಪ್ರತಿದಿನ ಬೆಳಿಗ್ಗೆ 9ಕ್ಕೆ ರಾಚೋಟೇಶ್ವರರ ಕರ್ತೃ ಗದ್ದುಗೆಗೆ ರುದ್ರಾಭಿಷೇಕ, ಪೂಜೆ, ಸಂಜೆ 6ಕ್ಕೆ ಮಹಿಳೆಯರಿಂದ ಸಿದ್ಧರಾಮೇಶ್ವರರು ತೋಡಿದ ಬಾವಿಗೆ ಗಂಗಾ ಪೂಜೆ, ಸಂಜೆ 7.30ಕ್ಕೆ ಪ್ರಸಾದ ವಿತರಣೆ, ರಾತ್ರಿ 8ಕ್ಕೆ ಆಳಂದ ತಾಲ್ಲೂಕಿನ ಹಿತ್ತಲಶಿರೂರಿನ ಶರಣಕುಮಾರ ಶಾಸ್ತ್ರಿ ಅವರಿಂದ ಜೀವನ ದರ್ಶನ ಪ್ರವಚನ, ಕಲಾವಿದರಿಂದ ಸಂಗೀತ, ಗುರುವಿನ ತುಲಾಭಾರ ಜರುಗಲಿದೆ. ಜ. 1ರಂದು ರಾತ್ರಿ 8.30ಕ್ಕೆ ಸಂಸದ ಸಾಗರ ಖಂಡ್ರೆ ಜಾತ್ರೆಗೆ ಚಾಲನೆ ನೀಡಲಿದ್ದಾರೆ. ಸೊಂತದ ಶಂಕರಲಿಂಗ ಮಹಾರಾಜ ಸಾನ್ನಿಧ್ಯ ವಹಿಸಲಿದ್ದಾರೆ. ಹಣೆಗಾಂವ್‍ನ ಶಂಕರಲಿಂಗ ಶಿವಾಚಾರ್ಯ, ಕೌಳಾಸದ ಬಸವಲಿಂಗ ಶಿವಾಚಾರ್ಯ ಸಮ್ಮುಖ ಹಾಗೂ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯ ನೇತೃತ್ವ ವಹಿಸಲಿದ್ದಾರೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ. ಮಠದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಜಾತ್ರಾ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು’ ಎಂದು ಹಾವಗಿಲಿಂಗೇಶ್ವರ ಶಿವಾಚಾರ್ಯರು ಕೋರಿದ್ದಾರೆ.

ಸಿದ್ಧರಾಮೇಶ್ವರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.