
ಭಾಲ್ಕಿ: ಪಟ್ಟಣದಲ್ಲಿ ಏಪ್ರಿಲ್‍ನಲ್ಲಿ ನಡೆಯಲಿರುವ ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ಸಮಾರಂಭಕ್ಕೆ ಕೇಂದ್ರದ ಉಕ್ಕು ಮತ್ತು ಭಾರಿ ಕೈಗಾರಿಕಾ ಖಾತೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ಮು ಆಹ್ವಾನಿಸಲಾಗಿದೆ.
ಬೆಂಗಳೂರಿನಲ್ಲಿ ಕೇಂದ್ರದ ಸಚಿವ ಕುಮಾರಸ್ವಾಮಿ ಅವರನ್ನು ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಭೇಟಿಯಾಗಿ ಬಸವಣ್ಣನವರ ಭಾವಚಿತ್ರ ನೀಡಿ ಗೌರವಿಸಿದರು.
ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಭಕ್ತ ವಲಯ ನಿರ್ಧರಿಸಿದೆ. ತಾವು ಕೂಡ ಮೂರು ದಿವಸ ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಸಾಕ್ಷಿಯಾಗಬೇಕು ಎಂದು ಸಚಿವ ಕುಮಾರಸ್ವಾಮಿ ಅವರನ್ನು ಪೂಜ್ಯರು ಕೋರಿದರು.
ಮಾಜಿ ಸಚಿವ ಬಂಡೆಪ್ಪ ಖಾಶೆಂಪುರೆ, ಬೀದರ್ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಸೋಮನಾಥ ಪಾಟೀಲ ಸೋಲಪುರ್ ಜತೆಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.