
ಭಾಲ್ಕಿ: ತಾಲ್ಲೂಕಿನ ನೀಲಮನಳ್ಳಿ ತಾಂಡಾ ಕ್ರಾಸ್ ಬಳಿ ಬುಧವಾರ ಬೆಳಿಗ್ಗೆ ಸ್ವಿಫ್ಟ್ ಡಿಸೈರ್ ಕಾರು ಹಾಗೂ ಡಿಟಿಡಿಸಿ ಕೊರಿಯರ್ ವಾಹನದ ಮಧ್ಯೆ ಡಿಕ್ಕಿ ಸಂಭವಿಸಿ ತೆಲಂಗಾಣದ ನಾಲ್ವರು ಯಾತ್ರಿಗಳು ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮೂವರು ಅಪಘಾತದ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಬ್ಬ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಪಟ್ಟ ರಾಚಪ್ಪ ಚಂದ್ರಪ್ಪ (57), ನವೀನ್ ಶರಣಪ್ಪ (30), ಕಾಶಿನಾಥ್ ರಾಮಶೆಟ್ಟಿ (60) ತೆಲಂಗಾಣ ರಾಜ್ಯದ ನಾರಾಯಣಖೇಡ್ ತಾಲ್ಲೂಕಿನ ಜಗನ್ನಾಥಪುರ ಗ್ರಾಮದವರು. ನಾಗರಾಜ ಕಿಸ್ತಯ್ಯ (38) ನಾರಾಯಣಖೇಡ್ ತಾಲ್ಲೂಕಿನ ಯಲಗೋಯಿ ಗ್ರಾಮದವರು.
ಅಪಘಾತದಲ್ಲಿ ಗಾಯಗೊಂಡ ಕೊರಿಯರ್ ವಾಹನದ ಚಾಲಕ ಮತ್ತು ಕಾರಿನಲ್ಲಿದ್ದ ಇನ್ನೊಬ್ಬ ವ್ಯಕ್ತಿ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಲಬುರಗಿ ಜಿಲ್ಲೆಯ ಗಾಣಗಾಪುರದ ದತ್ತಾತ್ರೇಯ ದೇವರ ದರ್ಶನಕ್ಕೆ ತೆರಳಿದ್ದರು. ದರ್ಶನ ಪಡೆದು ಊರಿಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಧನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸ್ಐ ವಿಶ್ವರಾಧ್ಯ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.