ADVERTISEMENT

’ವಿಜಯೋತ್ಸವ– 2024’ ನಾಳೆಯಿಂದ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2024, 15:58 IST
Last Updated 2 ಅಕ್ಟೋಬರ್ 2024, 15:58 IST
ಉದಯಕುಮಾರ ಕಲ್ಯಾಣೆ
ಉದಯಕುಮಾರ ಕಲ್ಯಾಣೆ   

ಭಾಲ್ಕಿ: ಪಟ್ಟಣದ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಭೀಮಣ್ಣ ಖಂಡ್ರೆ ತಾಂತ್ರಿಕ ಕಾಲೇಜಿನಲ್ಲಿ ಅ.4ರಿಂದ ‘ಕಾಲೇಜು ತಾಂತ್ರಿಕ ಮತ್ತು ಸಾಂಸ್ಕೃತಿಕ ಉತ್ಸವ– 2024’ರ ಅಂಗವಾಗಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬಿಕೆಐಟಿ ಪ್ರಾಚಾರ್ಯ ಉದಯಕುಮಾರ ಕಲ್ಯಾಣ ತಿಳಿಸಿದರು.

ಪಟ್ಟಣದ ಬಿಕೆಐಟಿ ಕಾಲೇಜಿನಲ್ಲಿ ಬುಧವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಎರಡು ದಿನ ಕಾಲೇಜಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ‘ವಿಜಯೋತ್ಸವ– 2024’ ಕಾರ್ಯಕ್ರಮ ಆಯೋಜಿಸಲಾಗಿದೆ. ಅ.4 ರಂದು ಹೊಸಬರ ಸಮ್ಮಿಲನ ಕಾರ್ಯಕ್ರಮ ನಡೆಯಲಿದೆ. ನಂತರ ರಂಗೋಲಿ, ಪೇಂಟಿಂಗ್ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಲಿವೆ. ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಅಂಕುಶ ಢೋಲೆ ಚಾಲನೆ ನೀಡುವರು. ಅ.5ರಂದು ನಡೆಯುವ ಸಾಂಸ್ಕೃತಿಕ ಉಡುಗೆ, ಪದವಿ ಪ್ರದಾನ ಮತ್ತು ಸಾಂಸ್ಕೃತಿಕ ರಾತ್ರಿ ಕಾರ್ಯಕ್ರಮಗಳಿಗೆ ಸಂಸ್ಥೆಯ ಕಾರ್ಯದರ್ಶಿಯೂ ಆದ ಸಂಸದ ಸಾಗರ ಖಂಡ್ರೆ ಚಾಲನೆ ನೀಡುವರು ಎಂದು ಮಾಹಿತಿ ನೀಡಿದರು.

ADVERTISEMENT

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್.ಪಿ ಪ್ರದೀಪ ಗುಂಟಿ, ತೆಲುಗು ಚಿತ್ರನಟ ದ್ವಾರಕೇಶ.ಪಿ ಪಾಲ್ಗೊಳ್ಳುವರು ಎಂದರು. ಎನ್.ಎಸ್.ಎಸ್ ಅಧಿಕಾರಿ ಬಿ.ಸೂರ್ಯಕಾಂತ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.