
ಪ್ರಜಾವಾಣಿ ವಾರ್ತೆ
ಬೀದರ್: ಶುಕ್ರವಾರ ರಾತ್ರಿ ನಿಧನರಾದ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ ಶನಿವಾರ (ಜ.17) ನೆರವೇರಲಿದೆ ಎಂದು ಅವರ ಮಗ, ಜಿಲ್ಲಾ ಉಸ್ತುವಾರಿ ಸಚಿವರೂ ಆದ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.
ಶನಿವಾರ ಬೆಳಿಗ್ಗೆ ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿ ಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು. ಸಂಜೆ ಭಾಲ್ಕಿ ಹೊರವಲಯದ ಚಿಕಲಚಂದಾ ಗ್ರಾಮ ಸಮೀಪದ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆ ಅವರ ಪತ್ನಿ ದಿವಂಗತ ಲಕ್ಷ್ಮೀಬಾಯಿ ಅವರ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನರವೇರಲಿವೆ ಎಂದು ಶುಕ್ರವಾರ ರಾತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.