
ಪ್ರಜಾವಾಣಿ ವಾರ್ತೆಭೀಮಣ್ಣ ಖಂಡ್ರೆ ಆರೋಗ್ಯ ವಿಚಾರಿಸಿದ ಸ್ವಾಮೀಜಿ
ಭಾಲ್ಕಿ (ಬೀದರ್ ಜಿಲ್ಲೆ): ಕಳೆದ ಎರಡು ದಿನಗಳಿಂದ ಚೇತರಿಕೆ ಕಂಡಿದ್ದ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಶುಕ್ರವಾರ ಮತ್ತೆ ಏರುಪೇರಾಗಿದೆ.
ಶುಕ್ರವಾರ ಮಧ್ಯಾಹ್ನ 2 ಗಂಟೆಯಿಂದ ಉಸಿರಾಟದಲ್ಲಿ ತೀವ್ರ ತೊಂದರೆ ಕಂಡು ಬಂದಿದೆ. ವೈದ್ಯರ ತಂಡ ನಿಗಾ ವಹಿಸಿದ್ದು ಚಿಕಿತ್ಸೆ ಮುಂದುವರೆಸಿದೆ.
ರಾಜ್ಯದ ವಿವಿಧ ಮಠಾಧೀಶರು, ರಾಜಕೀಯ ಪಕ್ಷಗಳ ಮುಖಂಡರು, ಅವರ ಬೆಂಬಲಿಗರು ನಿರಂತರವಾಗಿ ಅವರ ಮನೆಗೆ ಭೇಟಿ ಕೊಟ್ಟು ಯೋಗಕ್ಷೇಮ ವಿಚಾರಿಸುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.