ADVERTISEMENT

ಬೀದರ್‌: ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ

​ಪ್ರಜಾವಾಣಿ ವಾರ್ತೆ
Published 13 ಜನವರಿ 2026, 12:42 IST
Last Updated 13 ಜನವರಿ 2026, 12:42 IST
<div class="paragraphs"><p>ಭೀಮಣ್ಣ ಖಂಡ್ರೆ</p></div>

ಭೀಮಣ್ಣ ಖಂಡ್ರೆ

   

ಭಾಲ್ಕಿ (ಬೀದರ್‌ ಜಿಲ್ಲೆ): ವಯೋ ಸಹಜ ಕಾಯಿಲೆಯಿಂದ ಬಳಲುತ್ತಿರುವ ಮಾಜಿಸಚಿವ ಭೀಮಣ್ಣ ಖಂಡ್ರೆಯವರ ಆರೋಗ್ಯದಲ್ಲಿ ಮಂಗಳವಾರ ಮತ್ತಷ್ಟು ಚೇತರಿಕೆ ಕಂಡು ಬಂದಿದೆ.

ಒಂದು ವಾರ ಬೀದರ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಸೋಮವಾರ ಬೆಳಿಗ್ಗೆ ಮನೆಗೆ ಕೊಂಡೊಯ್ಯಲಾಗಿತ್ತು. ವೈದ್ಯರ ತಂಡ ಮನೆಯಲ್ಲಿಯೇ ಉಪಾಚಾರ ಮಾಡುತ್ತಿದ್ದು, ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಅವರ ಆರೋಗ್ಯದಲ್ಲಿ ಸುಧಾರಣೆ ಆಗಿದೆ ಎಂದು ವೈದ್ಯರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ADVERTISEMENT

‘ಸಾಮಾಜಿಕ ಜಾಲತಾಣಗಳಲ್ಲಿ ನಮ್ಮ ತಂದೆಯವರ ಕುರಿತು ಸುಳ್ಳು ವದಂತಿ ಹರಡುತ್ತಿದ್ದು, ಯಾರೂ ಅದಕ್ಕೆ ಕಿವಿಗೊಡಬಾರದು’ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.