
ಪ್ರಜಾವಾಣಿ ವಾರ್ತೆ
ಸಚಿವ ಈಶ್ವರ ಬಿ. ಖಂಡ್ರೆ ಅವರು ತಮ್ಮ ತಂದೆಯ ಆರೋಗ್ಯದ ಕುರಿತು ಬುಧವಾರ ಮಧ್ಯಾಹ್ನ ವೈದ್ಯರಿಂದ ಮಾಹಿತಿ ಪಡೆದರು
ಭಾಲ್ಕಿ (ಬೀದರ್ ಜಿಲ್ಲೆ): ಮಾಜಿ ಸಚಿವ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಮಾಜಿ ಅಧ್ಯಕ್ಷ ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ.
ಉಸಿರಾಟ, ಬಿಪಿ ಸಹ ಚೇತರಿಕೆಯಾಗಿದ್ದು, ಆಗಾಗ ಕಣ್ಣು ತೆರೆದು ನೋಡುತ್ತಿದ್ದಾರೆ. ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಬುಧವಾರವೂ ಅನೇಕ ಜನ ಅವರ ಮನೆಗೆ ಭೇಟಿ ಕೊಟ್ಟು ಯೋಗಕ್ಷೇಮ ವಿಚಾರಿಸಿದರು. ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ. ಖಂಡ್ರೆ, ಸಂಸದ ಸಾಗರ ಖಂಡ್ರೆ ಸೇರಿದಂತೆ ಕುಟುಂಬ ಸದಸ್ಯರು ಮನೆಯಲ್ಲೇ ಇದ್ದು, ವೈದ್ಯರ ತಂಡದಿಂದ ಕಾಲಕಾಲಕ್ಕೆ ಮಾಹಿತಿ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.