ಬೀದರ್: ನಗರದ ಜಿಲ್ಲಾ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ಜಿಲ್ಲಾ ಶಾಖೆಯ ಮೂರನೇ ವಾರ್ಷಿಕೋತ್ಸವ ಸಮಾರಂಭ ಸಂಭ್ರಮದಿಂದ ಆಚರಿಸಲಾಯಿತು.
ಜಿಲ್ಲಾ ಕುಷ್ಠರೋಗ ನಿರ್ಮೂಲನೆ ಅಧಿಕಾರಿ ಡಾ.ಕಿರಣ ಪಾಟೀಲ ಮಾತನಾಡಿ,‘1980ರ ದಶಕದಿಂದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು ವಿವಿಧ ಹಳ್ಳಿಗಳಿಗೆ ಹೋಗಿ ರೋಗಿಗಳಿಗೆ ಉಪಾಚಾರ ಮಾಡುತ್ತಿದ್ದರು. ಆಗ ಯಾವುದೇ ವ್ಯವಸ್ಥೆ ಇರಲಿಲ್ಲ. ಅವರ ಸೇವಾ ಮನೋಭಾವ ದೊಡ್ಡದು’ ಎಂದರು.
ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿವೇಕ ಸ್ವಾಮಿ ಮಾತನಾಡಿ,‘1992ರ ಪೂರ್ವದಲ್ಲಿ ಸಾಂಕ್ರಾಮಿಕ ರೋಗ ತಡೆಗಟ್ಟಲು ಹಿರಿಯ ಆರೋಗ್ಯ ನಿರೀಕ್ಷಕರು ಸಾಕಷ್ಟು ಶ್ರಮಿಸಿದ್ದರು’ ಎಂದು ತಿಳಿಸಿದರು.
ಯಾದಗಿರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಅಧಿಕಾರಿ ಡಾ.ಮಹೇಶ ಬಿರಾದಾರ ಮಾತನಾಡಿ,‘48 ರಾಷ್ಟ್ರೀಯ ಕಾರ್ಯಕ್ರಮಗಳನ್ನು ದೇಶದಲ್ಲಿ ಅನುಷ್ಠಾನಕ್ಕೆ ತರಲು ಆರೋಗ್ಯ ನಿರೀಕ್ಷಣಾಧಿಕಾರಿಗಳು ದುಡಿಯುತ್ತಿದ್ದಾರೆ. ಅವರ ಸೇವೆ ಬಹಳ ದೊಡ್ಡದು’ ಎಂದರು.
ಲಿಂಗಾಯತ ಮಹಾಮಠದ ಪ್ರಭುದೇವ ಸ್ವಾಮೀಜಿ, ಬ್ರಿಮ್ಸ್ ಕನ್ನಡ ಸಂಘದ ಸಂಯೋಜಕ ರಾಜಕುಮಾರ ಹೆಬ್ಬಾಳೆ, ಸಂಘದ ರಾಜ್ಯ ಖಜಾಂಚಿ ಬಸವರಾಜ ಚಿಕಬೇನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಧ್ಯಾನೇಶ್ವರ ನೀರಗುಡಿ, ಡಾ.ರಾಜಶೇಖರ ಪಾಟೀಲ, ಡಾ.ದಿಲೀಪ್ ಡೊಂಗ್ರೆ, ಡಾ.ಮಹದೇವಪ್ಪ ಮಾಳಗೆ, ಡಾ.ಶಂಕ್ರೆಪ್ಪ ಬೊಮ್ಮ, ನೌಕರರ ಸಂಘದ ಜಿಲ್ಲಾಧ್ಯಕ್ಷ ಸೋಮಶೇಖರ ಬಿರಾದಾರ, ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ, ಜಿಲ್ಲಾ ಖಜಾಂಚಿ ದೇವಪ್ಪ ಚಾಂಬೋಳೆ, ವೀರಶೆಟ್ಟಿ ಚನಶೆಟ್ಟಿ, ವಿದ್ಯಾಸಾಗರ ಹಾಗೂ ಬಲರಾಮ ಪಾಂಚಾಳ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.