ಔರಾದ್: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಇಲ್ಲಿಯ ಪೌರ ನೌಕರರು ಬುಧವಾರ ಶಾಸಕ ಪ್ರಭು ಚವಾಣ್ ಅವರನ್ನು ಭೇಟಿ ಮಾಡಿ ಮನವಿಪತ್ರ ಸಲ್ಲಿಸಿದರು.
ಕರ್ನಾಟಕ ರಾಜ್ಯ ಪೌರ ನೌಕರರ ಸಂಘದ ಜಿಲ್ಲಾಧ್ಯಕ್ಷ ಸೈಯದ್‌ಖಾನ್ ನೇತೃತ್ವದಲ್ಲಿ ಶಾಸಕರನ್ನು ಭೇಟಿ ಮಾಡಿ, ಪೌರರನ್ನು ಸರ್ಕಾರಿ ನೌಕರ ಎಂದು ಪರಿಗಣಿಸಬೇಕು. ಎಲ್ಲ ಪೌರ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದು, ನೀರು ಸರಬರಾಜುದಾರರು, ಸಹಾಯಕರು, ವಾಹನ ಚಾಲಕರು, ಬೀದಿದೀಪ ಹಾಗೂ ಉದ್ಯಾನ ನಿರ್ವಹಣೆ ಮಾಡುವವರು ಸೇರಿದಂತೆ ಗುತ್ತಿಗೆ ಆಧಾರಲ್ಲಿ ಕೆಲಸ ಮಾಡುತ್ತಿರುವ ಪೌರ ನೌಕರರ ಸೇವೆ ಕಾಯಂ ಮಾಡುವುದು ತಮ್ಮ ಪ್ರಮುಖ ಬೇಡಿಕೆಯಾಗಿವೆ. ತಮ್ಮ ಬೇಡಿಕೆಗೆ ಸ್ಪಂದಿಸಿ ಸರ್ಕಾರದ ಮೇಲೆ ಒತ್ತಡ ಹಾಕುವಂತೆ ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.