ADVERTISEMENT

ಬೀದರ್: ನಾಳೆಯಿಂದ ಎಪಿಎಂಸಿ ಪುನರಾರಂಭ

ಎಪಿಎಂಸಿ ಖರೀದಿದಾರರು, ವ್ಯಾಪಾರಸ್ಥರು, ಅಧಿಕಾರಿಗಳ ಜತೆ ಜಿಲ್ಲಾಧಿಕಾರಿ ಸಭೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 15:22 IST
Last Updated 1 ಏಪ್ರಿಲ್ 2020, 15:22 IST
ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಎಪಿಎಂಸಿ ಖರೀದಿದಾರರು ಹಾಗೂ ವ್ಯಾಪಾರಿಗಳ ಸಭೆಯಲ್ಲಿ ಗಾಂಧಿಗಂಜ್‍ನ ದಿ ಗ್ರೇನ್‌ ಆ್ಯಂಡ್‌ ಸೀಡ್ಸ್‌ ಮರ್ಚಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿದರು
ಬೀದರ್‌ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಎಪಿಎಂಸಿ ಖರೀದಿದಾರರು ಹಾಗೂ ವ್ಯಾಪಾರಿಗಳ ಸಭೆಯಲ್ಲಿ ಗಾಂಧಿಗಂಜ್‍ನ ದಿ ಗ್ರೇನ್‌ ಆ್ಯಂಡ್‌ ಸೀಡ್ಸ್‌ ಮರ್ಚಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಬಸವರಾಜ ಧನ್ನೂರ ಮಾತನಾಡಿದರು   

ಬೀದರ್: ಜಿಲ್ಲೆಯಲ್ಲಿ ಏ. 3ರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಕಾರ್ಯಾರಂಭ ಮಾಡಲಿದೆ.

ರೈತರ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳನ್ನು ಆರಂಭಿಸುವ ಕುರಿತು ಜಿಲ್ಲಾಧಿಕಾರಿ ಎಚ್.ಆರ್.ಮಹಾದೇವ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಇಲ್ಲಿ ನಡೆದ ಕೃಷಿ ಇಲಾಖೆ, ಎಪಿಎಂಸಿಯ ಎಲ್ಲ ತಾಲ್ಲೂಕುಗಳ ಕಾರ್ಯದರ್ಶಿಗಳು, ದಿ ಗ್ರೇನ್ ಆ್ಯಂಡ್ ಸೀಡ್ಸ್ ಮರ್ಚಂಟ್ಸ್ ಅಸೋಸಿಯೇಶನ್‌ ಅಧ್ಯಕ್ಷರು ಹಾಗೂ ವ್ಯಾಪಾರಿಗಳ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಜಿಲ್ಲಾಧಿಕಾರಿ ಮಾತನಾಡಿ, ‘ಜಿಲ್ಲೆಯಲ್ಲಿ ಲಾಕ್‍ಡೌನ್ ಆದೇಶ ಜಾರಿಯಲ್ಲಿದ್ದು, ಸಾರ್ವಜನಿಕರಿಗೆ ಯಾವುದೇ ದವಸ ಧಾನ್ಯಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕಾಗಿದೆ’ ಎಂದು ತಿಳಿಸಿದರು.

ADVERTISEMENT

‘ಲಾಕ್‌ಡೌನ್ ಆದೇಶ ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ವ್ಯಾಪಾರ ಆರಂಭಿಸುವ ವ್ಯಾಪಾರಿಗಳು ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು. ಕಡ್ಡಾಯ ಸ್ಯಾನಿಟೈಸರ್ ಹಾಗೂ ರೈತರಿಗೆ ಅನುಕೂಲವಾಗುವಂತೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ವ್ಯಾಪಾರಿಗಳಿಗೆ ಯಾವುದೇ ತೊಂದರೆಯಾಗದಂತೆ ಪಾಸ್‌ಗಳನ್ನು ಕೊಡಲಾಗುವುದು’ ಎಂದು ಹೇಳಿದರು.

ಸೂಚನೆ: ‘ಜಿಲ್ಲೆಯ ರೈತರಿಗೆ ರಸಗೊಬ್ಬರ, ಕ್ರಿಮಿನಾಶಕ ಔಷಧಿಗಳು ಮತ್ತು ಇತರ ವಸ್ತುಗಳ ಕೊರತೆ ಆಗದಂತೆ ನೋಡಿಕೊಳ್ಳಬೇಕಾಗಿದೆ. ‌ಈ ನಿಟ್ಟಿನಲ್ಲಿ ಸಾಕಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಕೃಷಿ ಉತ್ಪನ್ನ ಮಾರುಕಟ್ಟೆಗಳನ್ನು ಆರಂಭಿಸಲು ಕ್ರಮಕೈಗೊಳ್ಳಬೇಕು’ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸಹಾಯಕ ನಿರ್ದೇಶಕ ತಳಸಿರಾಮ ಲಾಖೆ ಅವರಿಗೆ ನಿರ್ದೇಶನ ನೀಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ್ ಗಾಳಿ, ಕೃಷಿ ಇಲಾಖೆ ನಿರ್ದೇಶಕ ದಯಾನಂದ, ಗಾಂಧಿಗಂಜ್‍ನ ದಿ ಗ್ರೇನ್‌ ಆ್ಯಂಡ್‌ ಸೀಡ್ಸ್‌ ಮರ್ಚಂಟ್ಸ್‌ ಅಸೋಸಿಯೇಷನ್‌ ಅಧ್ಯಕ್ಷ ಬಸವರಾಜ ಧನ್ನೂರ, ವ್ಯಾಪಾರಸ್ಥರು, ಖರೀದಿದಾರರು ಹಾಗೂ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.