
ಪ್ರಜಾವಾಣಿ ವಾರ್ತೆ
ಬೀದರ್: ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಎರಡು ಕಾರುಗಳು ಸುಟ್ಟು ಹೋಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರದಲ್ಲಿ ಸೋಮವಾರ ನಡೆದಿದೆ.
ಗ್ರಾಮದ ಕಲ್ಯಾಣ ಮಂಪಟದಲ್ಲಿ ನಿಗದಿಯಾಗಿದ್ದ ಮದುವೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಯಾದಗಿರಿ ಜಿಲ್ಲೆಯ ಶಹಾಪುರದವರಿಗೆ ಸೇರಿದ ಇಬ್ಬರ ಕಾರುಗಳು ಸುಟ್ಟು ಹೋಗಿವೆ. ವಿಷಯ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಕಾರುಗಳು ಸಂಪೂರ್ಣ ಸುಟ್ಟು ಹೋಗಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.