
ಬೀದರ್: ನಗರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಹಾಗೂ ಬೊಮ್ಮಗೊಂಡೇಶ್ವರ ವೃತ್ತ ಸೇರಿದಂತೆ ವಿವಿಧೆಡೆ ಶನಿವಾರ ಬಿರ್ಸಾ ಮುಂಡಾ ಜಯಂತಿಯ ಅಂಗವಾಗಿ ‘ಆದಿವಾಸಿ ಗೌರವ ದಿನ’ವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಿರೀಶ್ ರಂಜೊಳಕರ್, ಪರಿಶಿಷ್ಟ ವರ್ಗಗಳ ತಾಲ್ಲೂಕ ಕಲ್ಯಾಣಾಧಿಕಾರಿ ಶಂಕ್ರಯ್ಯ ಸ್ವಾಮಿ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಕಚೇರಿಯ ಸಿಬ್ಬಂದಿ ಇದ್ದರು.
ನಗರದ ಬೊಮ್ಮಗೊಂಡೇಶ್ವರ ವೃತ್ತದ ಬಳಿ ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.
ಅಖಿಲ ಭಾರತೀಯ ಗೊಂಡ ಆದಿವಾಸಿ ಸಂಘದ ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಮಾಳಪ್ಪ ಅಡಸಾರೆ, ಆದಿವಾಸಿ ಸಾಹಿತ್ಯ ಪರಿಷತ್ ಅಧ್ಯಕ್ಷ ವಿಜಯಕುಮಾರ್ ಡುಮ್ಮೆ ಬಿರ್ಸಾ, ಅಖಿಲ ಭಾರತೀಯ ಗೊಂಡ ಆದಿವಾಸಿ ಸಂಘದ ಜಿಲ್ಲಾಧ್ಯಕ್ಷ ನಾರಾಯಣ ಭಂಗಿ, ಗೊಂಡ ನೌಕರರ ಸಂಘದ ಮಾಜಿ ಅಧ್ಯಕ್ಷ ಎಂ.ಎಸ್.ಕಟಗಿ, ಗೊಂಡ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಕುಶಾಲ್ ಎರನಳ್ಳಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಮಾರುತಿ ತಮ್ಮಗೊಂಡ, ಸುನಿಲ ಖಾಶೇಂಪುರ, ಜಗನ್ನಾಥ ಜಮಾದಾರ, ತುಕಾರಾಮ ಚಿಮಕೋಡ್, ರತನ್ ಮಹಾರಾಜ್, ರಘುನಾಥ ರಾಯಗೊಂಡ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.