ADVERTISEMENT

ಪ್ರಕರಣ ವಿಚಾರಣೆ 23ಕ್ಕೆ ಮುಂದೂಡಿಕೆ

ಶಾಹೀನ್‌ ಶಾಲೆಯಲ್ಲಿ ವಿವಾದಾತ್ಮಕ ನಾಟಕ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2020, 14:32 IST
Last Updated 9 ಮಾರ್ಚ್ 2020, 14:32 IST

ಬೀದರ್‌: ಶಾಹೀನ್ ಪ್ರಾಥಮಿಕ ಶಾಲೆಯಲ್ಲಿ ವಿವಾದಾತ್ಮಕ ನಾಟಕ ಪ್ರದರ್ಶಿಸಿದ ಪ್ರಕರಣದ ವಿಚಾರಣೆಯನ್ನು ಇಲ್ಲಿಯ 2ನೇ ಹೆಚ್ಚುವರಿ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ ಮಾರ್ಚ್ 23ಕ್ಕೆ ಮುಂದೂಡಿದೆ.

ವಿವಾದಾತ್ಮಕ ನಾಟಕ ಪ್ರದರ್ಶಿಸಿದ ಪ್ರಕರಣದ ವಿಚಾರಣೆ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ನಡೆದರೆ, ಪೊಲೀಸರು ಅಂತಿಮ ವರದಿ ಸಲ್ಲಿಸಿದ ನಂತರ ದೇಶ ದ್ರೋಹ ಪ್ರಕರಣದ ವಿಚಾರಣೆ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯದಲ್ಲಿ ಆರಂಭವಾಗಲಿದೆ.

ನ್ಯಾಯಾಲಯದಲ್ಲಿ ದೋಷಾರೋಪಣೆ ಪಟ್ಟಿ ಸಲ್ಲಿಸಿದ ಸಂದರ್ಭದಲ್ಲೇ ನ್ಯೂಟೌನ್‌ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಘಟನೆ ನಡೆದ ಸ್ಥಳದ ಆಧಾರದ ಮೇಲೆ ಗಾಂಧಿ ಗಂಜ್ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

ದೇಶ ದ್ರೋಹದ ಆರೋಪ ಎದುರಿಸುತ್ತಿರುವ ಶಾಹೀನ್‌ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ಶಾಲೆಯಲ್ಲಿ ನಾಟಕ ಮಾಡಿದ 6ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯ ತಾಯಿ ನಜಮುನ್ನಿಸಾ ಅವರಿಗೆ ಫೆಬ್ರುವರಿ 14ರಂದು, ವಿಡಿಯೊ ಫೇಸ್‌ಬುಕ್‌ಗೆ ಅಪ್‌ಲೋಡ್‌ ಮಾಡಿದ ಪತ್ರಕರ್ತ ಯುಸೂಫ್ ರಹೀಂ ಅವರಿಗೆ ಮಾರ್ಚ್‌ 2 ರಂದು ಹಾಗೂ ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್‌ ಖದೀರ್‌ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮಾರ್ಚ್ 3 ರಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯ ಜಾಮೀನು ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.