
ಬೀದರ್: ‘ಶತಮಾನಗಳ ಇತಿಹಾಸ ಹೊಂದಿರುವ ಬಿದರಿ ಕಲೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಬಿರ್ಸಾ ಮುಂಡಾ ಅವರ ಜಯಂತಿಯಂದು ಬುಡಕಟ್ಟು ಸಮುದಾಯದ ನಿರ್ಮಿತ ಬಿದರಿ ಕಲೆಗೆ ಪ್ರೋತ್ಸಾಹ ನೀಡಬೇಕು ಎನ್ನುವ ಹಿತದೃಷ್ಟಿಯಿಂದ ಬಿದರಿ ಕಲಾಕೃತಿಗಳು ಆನ್‍ಲೈನ್ ಖರೀದಿ ವೈಬ್ಸೈಟ್ಗೆ ಚಾಲನೆ ನೀಡಿರುವುದು ಹೆಮ್ಮೆಯ ಸಂಗತಿ’ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ.ಶೈಲೇಂದ್ರ ಕೆ. ಬೆಲ್ದಾಳೆ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಬಿರ್ಸಾ ಮುಂಡಾ ಅವರ 150ನೇ ಜನ್ಮದಿನದ ನಿಮಿತ್ತ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಬಿದರಿ ಕಲಾಕೃತಿಗಳ ಆನ್‍ಲೈನ್ ಖರೀದಿ ವೈಬ್ಸೈಟ್ಗೆ ಚಾಲನೆ ನೀಡಿ ಮಾತನಾಡಿದರು.
‘ಬಿದರಿ ಕಲೆಯನ್ನು ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಕುಶಲಕರ್ಮಿಗಳು ವಶಂಪರಪರಾಗತವಾಗಿ ಬಂದಿರುವ ವೃತ್ತಿಯನ್ನು ಬಿಟ್ಟು ಬೇರೆ ಉದ್ಯೋಗವನ್ನು ಅರಸಿಕೊಂಡು ಗೂಳೆ ಹೋಗುತ್ತಿದ್ದಾರೆ. ಈ ಕಲೆ ನಂಬಿಕೊಂಡು ಬದುಕು ಕಟ್ಟಿಕೊಂಡಿರುವ ಕಲಾವಿದರನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರ ಮುಂದಾಗಿದೆ’ ಎಂದರು.
ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಬಿರ್ಸಾ ಮುಂಡಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಜಿ.ಪಂ ಉಪಕಾರ್ಯದರ್ಶಿ (ಆಡಳಿತ) ಸೂರ್ಯಕಾಂತ ಬಿರಾದಾರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಿರೀಶ ರಂಜೊಳಕರ್, ಪರಿಶಿಷ್ಟ ವರ್ಗಗಳ ತಾಲ್ಲೂಕ ಕಲ್ಯಾಣಾಧಿಕಾರಿ ಶಂಕ್ರಯ್ಯ ಬಂಕಾಪೂರಮಠ, ರಾಜಗೊಂಡ ಸಮಾಜದ ಗುರುಗಳಾದ ರತನ ಮಹಾರಾಜ, ಠಾಕೂರ ಉಖ್ಯೆ, ಜಗನ್ನಾಥ ಜಮಾದಾರ, ಮಾಳಪ್ಪಾ ಆಡಸಾರೆ, ಮಾರುತಿ ಮಾಸ್ಟರ, ಎಮ್.ಎಸ್.ಕಟಗಿ, ಸಮಾಜದ ಮುಖಂಡರು, ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.