
ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಚನ್ನಬಸವೇಶ್ವರ ಗುರುಕುಲದಲ್ಲಿ 2026-27ನೇ ಸಾಲಿನ 6ನೇ ತರಗತಿಯ ಕನ್ನಡ ಮಾಧ್ಯಮದ ಉಚಿತ ಪ್ರವೇಶಕ್ಕಾಗಿ ನಡೆದ ಎರಡು ಹಂತದ ಪ್ರವೇಶ ಪರೀಕ್ಷೆಯನ್ನು ಒಟ್ಟು 4,777 ವಿದ್ಯಾರ್ಥಿಗಳು ಬರೆದರು ಎಂದು ಪ್ರಾಚಾರ್ಯ ಬಸವರಾಜ ಮೊಳಕೀರೆ ತಿಳಿಸಿದ್ದಾರೆ.
‘ಭಾನುವಾರ ನಡೆದ ಎರಡನೇ ಹಂತದ ಪರೀಕ್ಷೆಯಲ್ಲಿ 2554 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇನ್ನೂ ಇದಕ್ಕೂ ಮುನ್ನ ಫೆ.15ರ ಭಾನುವಾರ ನಡೆದ ಪ್ರಥಮ ಹಂತದ ಪರೀಕ್ಷೆಯಲ್ಲಿ 2,223 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಬೀದರ್ ಜಿಲ್ಲೆ ಅಲ್ಲದೇ ಕಲಬುರಗಿ, ಯಾದಗಿರಿ, ವಿಜಯಪುರ, ಬಾಗಲಕೋಟ, ಬೆಳಗಾವಿ ಸೇರಿ ಮುಂತಾದ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಈ ಸ್ಕಾಲರ್ ಶಿಪ್ ಪರೀಕ್ಷೆಗೆ ಹಾಜರಾಗಿದ್ದರು’ ಎಂದು ತಿಳಿಸಿದ್ದಾರೆ.
‘ಹಿರೇಮಠ ಸಂಸ್ಥಾನ ವಿದ್ಯಾಪೀಠ ಟ್ರಸ್ಟ್‌ನ ವತಿಯಿಂದ ಕನ್ನಡ ಮಾಧ್ಯಮದ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಸ್ಕಾಲರ್‌ಶಿಪ್ ಪ್ರವೇಶ ಪರೀಕ್ಷೆ ಏರ್ಪಡಿಸಿ, ಪ್ರವೇಶ ಪರೀಕ್ಷೆಯಲ್ಲಿ ಕ್ರಮವಾಗಿ ಹೆಚ್ಚು ಅಂಕ ಗಳಿಸುವ 30 ವಿದ್ಯಾರ್ಥಿಗಳಿಗೆ 5 ವರ್ಷ ಉಚಿತ ಶಿಕ್ಷಣ, ವಸತಿ, ಕೋಚಿಂಗ್ ಸೌಲಭ್ಯ ಸಿಗಲಿದೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.