ಬೀದರ್: ‘ನರ್ಸರಿಯಲ್ಲಿ ಓದುತ್ತಿರುವ ನಾಲ್ಕು ವರ್ಷದ ಬಾಲಕಿಗೆ ಆಕಸ್ಮಿಕವಾಗಿ ಯಾವುದೋ ವಸ್ತು ಚುಚ್ಚಿದ್ದರಿಂದ ಮೇಲ್ಭಾಗದಲ್ಲಿ ಗಾಯವಾಗಿದೆ. ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಯಾವುದೇ ಕುರುಹುಗಳು ಕಂಡು ಬಂದಿಲ್ಲ ಎಂಬುದು ವೈದ್ಯಕೀಯ ಪರೀಕ್ಷೆಯಿಂದ ತಿಳಿದು ಬಂದಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ತಿಳಿಸಿದ್ದಾರೆ.
‘ಬ್ರಿಮ್ಸ್ ಆಸ್ಪತ್ರೆಯಲ್ಲಿ ಮಗುವಿನ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಲೈಂಗಿಕ ದೌರ್ಜನ್ಯ ನಡೆದ ಯಾವುದೇ ಕುರುಹುಗಳಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಬಾಲಕಿ ಪೋಷಕರಿಗೆ ಮಕ್ಕಳ ರಕ್ಷಣಾ ಘಟಕದಲ್ಲಿ ಆಪ್ತ ಸಮಾಲೋಚನೆ ನಡೆಸಲಾಗಿದೆ. ವೈದ್ಯಕೀಯ ಪರೀಕ್ಷೆ ಹಾಗೂ ತನಿಖೆ ಕುರಿತು ಬಾಲಕಿ ಪೋಷಕರಿಗೆ ಎಲ್ಲ ರೀತಿಯ ಮಾಹಿತಿ ನೀಡಲಾಗಿದೆ. ಸಾರ್ವಜನಿಕರು ವದಂತಿಗೆ ಕಿವಿಗೊಡಬಾರದು’ ಎಂದು ಶನಿವಾರ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.
ಶಾಲಾ ನರ್ಸರಿ ಅವಧಿಯಲ್ಲಿ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಬಾಲಕಿ ತಾಯಿ ನೀಡಿದ ದೂರಿನನ್ವಯ ಜು. 24ರಂದು ನಗರದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.