ADVERTISEMENT

ಬೀದರ್‌: ಜಿಲ್ಲೆಯಲ್ಲಿ ಮತ್ತೆ 10 ಜನರಿಗೆ ಕೋವಿಡ್ ಸೋಂಕು

​ಪ್ರಜಾವಾಣಿ ವಾರ್ತೆ
Published 2 ಜೂನ್ 2020, 15:14 IST
Last Updated 2 ಜೂನ್ 2020, 15:14 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೀದರ್‌: ಜಿಲ್ಲೆಯಲ್ಲಿ ಮಂಗಳವಾರ 10 ಜನರಿಗೆ ಕೋವಿಡ್‌-19 ಸೋಂಕು ತಗುಲಿರುವುದು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ವೈರಾಣು ಪೀಡಿತರ ಸಂಖ್ಯೆ 175ಕ್ಕೆ ಏರಿದೆ.

ಮಹಾರಾಷ್ಟ್ರದ ಮುಂಬೈ ಹಾಗೂ ಪುಣೆಯಿಂದ ಬೀದರ್‌ ಜಿಲ್ಲೆಗೆ ಮರಳಿ ಕ್ವಾರಂಟೈನ್‌ನಲ್ಲಿ ಇದ್ದ 53, 31, 35, 44, 38, 26 ಹಾಗೂ 20 ಪುರುಷ, 32, 29 ವರ್ಷದ ಮಹಿಳೆ ಹಾಗೂ 15 ವರ್ಷದ ಬಾಲಕಿಯ ಗಂಟಲು ದ್ರವ ಮಾದರಿ ಪಡೆದು ಕಲಬುರ್ಗಿಯ ಪ್ರಯೋಗಾಲಯಕ್ಕೆ ಕಳಿಸಲಾಗಿತ್ತು. ಮಂಗಳವಾರ ಇವರೆಲ್ಲರ ವರದಿ ಪಾಸಿಟಿವ್‌ ಬಂದಿದೆ.

ಜಿಲ್ಲಾ ಆಸ್ಪತ್ರೆಯ ವಿಶೇಷ ನಿಗಾ ಘಟಕದಲ್ಲಿದ್ದ 41 ಜನರು ಗುಣಮುಖರಾಗಿ ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.