ADVERTISEMENT

ಬೀದರ್: ಸುಳ್ಳು ಜಾತಿ ಪ್ರಮಾಣ ಪತ್ರ, ತನಿಖೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 30 ಮೇ 2020, 15:26 IST
Last Updated 30 ಮೇ 2020, 15:26 IST

ಬೀದರ್: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿಯ ಸುಳ್ಳು ಪ್ರಮಾಣ ಪತ್ರ ವಿತರಿಸಿದ್ದಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ನಡೆಸಬೇಕು ಎಂದು ದಲಿತ ಶೋಷಿತ ಸಮಾಜ ಸಂಘರ್ಷ ಸಮಿತಿ ಒತ್ತಾಯಿಸಿದೆ.

ಸಮಿತಿಯ ರಾಜ್ಯ ಉಪಾಧ್ಯಕ್ಷ ರಾಜಕುಮಾರ ಮೂಲಭಾರತಿ, ದಲಿತ ವಿಮೋಚನೆ ಮಾನವ ಹಕ್ಕುಗಳ ವೇದಿಕೆಯ ವಿಭಾಗೀಯ ಸಂಚಾಲಕ ರವಿ ವಾಘಮಾರೆ, ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಅರುಣ ಪಟೇಲ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಅಭಿ ಕಾಳೆ, ಮುಖಂಡ ಉಮೇಶಕುಮಾರ ಸ್ವಾರಳ್ಳಿಕರ್ ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.

ರವೀಂದ್ರ ಕಲ್ಲಯ್ಯ ಸ್ವಾಮಿ ಹಾಗೂ ಇತರೆ 8 ಜನ ಪರಿಶಿಷ್ಟ ಜಾತಿಯ ಪಟ್ಟಿಯ ಕ್ರಮ ಸಂಖ್ಯೆ 19 ರ ಬೇಡ ಜಂಗಮ, ಕ್ರಮ ಸಂಖ್ಯೆ 234 ರ ಭೋವಿ, ಕ್ರಮ ಸಂಖ್ಯೆ 68 ರ ಮಾಲ ಜಂಗಮ ಹೆಸರಲ್ಲಿ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದಿದ್ದಾರೆ ಎಂದು ಆಪಾದಿಸಿದ್ದಾರೆ.

ADVERTISEMENT

ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ವಿಳಂಬ ಮಾಡಿದ ಜಿಲ್ಲಾಧಿಕಾರಿ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.