ADVERTISEMENT

ಎಸ್‌ಎಸ್‌ಎಲ್‌ಸಿ ಫಲಿತಾಂಶ | 29 ಅಂಶ ಅನುಷ್ಠಾನ ಕಡ್ಡಾಯ: ಡಿಸಿ ಶಿಲ್ಪಾ ಶರ್ಮಾ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 6:40 IST
Last Updated 26 ಜುಲೈ 2025, 6:40 IST
<div class="paragraphs"><p>ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ನೂರಕ್ಕೆ ನೂರು ಫಲಿತಾಂಶ ಗಳಿಸಿರುವ ಬೀದರ್‌ನ ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯೆ ಸುನೀತಾ ಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸನ್ಮಾನಿಸಿದರು</p></div>

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ನೂರಕ್ಕೆ ನೂರು ಫಲಿತಾಂಶ ಗಳಿಸಿರುವ ಬೀದರ್‌ನ ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯೆ ಸುನೀತಾ ಸ್ವಾಮಿ ಅವರನ್ನು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸನ್ಮಾನಿಸಿದರು

   

ಬೀದರ್‌: ‘ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೆಚ್ಚಿಸಲು ಶಿಕ್ಷಣ ಇಲಾಖೆಯು ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮಗಳನ್ನು ಎಲ್ಲ ಶಾಲೆಗಳಲ್ಲಿ ಕಡ್ಡಾಯವಾಗಿ ಅನುಷ್ಠಾನಕ್ಕೆ ತರಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ನಿರ್ದೇಶನ ನೀಡಿದರು.

ನಗರದ ಸರ್ಕಾರಿ ನೌಕರರ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ 2024-25 ನೇ ಸಾಲಿನ ಪರಖ್‌ ರಾಷ್ಟ್ರೀಯ ಸರ್ವೇಕ್ಷಣ ಸಮೀಕ್ಷೆ ಹಾಗೂ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಕೈಗೊಳ್ಳಬೇಕಾದ ಕ್ರಮಗಳು ಮತ್ತು ಎಸ್ಎಸ್ಎಲ್‌ಸಿ ಫಲಿತಾಂಶ ಉತ್ತಮ ಪಡಿಸುವ ಶಿಕ್ಷಣ ಇಲಾಖೆ ಹೊರಡಿಸಿರುವ 29 ಅಂಶಗಳ ಕಾರ್ಯಕ್ರಮದ ಪರಿಣಾಮಕಾರಿ ಅನುಷ್ಠಾನ ಕುರಿತು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಕ್ರೈಸ್ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಶಾಲೆಗಳ ಮತ್ತು ಕೇಂದ್ರ ಸರ್ಕಾರದ ನವೋದಯ, ಕೇಂದ್ರೀಯ ವಿದ್ಯಾಲಯಗಳ ಮುಖ್ಯಸ್ಥರೊಂದಿಗೆ ನಡೆಸಿದ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ADVERTISEMENT

ಪ್ರತಿಯೊಂದು ಶಾಲೆಗಳ ಮುಖ್ಯ ಶಿಕ್ಷಕರಿಂದ ಶಾಲೆಯಲ್ಲಿ ಫಲಿತಾಂಶ ಸುಧಾರಣೆಗೆ ಕೈಗೊಳ್ಳುತ್ತಿರುವ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದರು. ಯಾವ ರೀತಿ ಪಾಠ ಮಾಡಬೇಕು. ಶಾಲೆಯಲ್ಲಿ ಕೈಗೊಳ್ಳಬಹುದಾದ ಹೊಸ ಚಟುವಟಿಕೆಗಳ ಬಗ್ಗೆ ಸಮಗ್ರ ಮಾಹಿತಿ ಪಡೆದರು.

ಪರಖ್‌ ರಾಷ್ಟ್ರೀಯ ಸರ್ವೇಕ್ಷಣ ಸಮೀಕ್ಷೆಯ ಪ್ರಕಾರ, ಜಿಲ್ಲೆಯ ಫಲಿತಾಂಶ ಕಡಿಮೆ ಇರುವುದರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಈ ರೀತಿಯ ಫಲಿತಾಂಶ ಮರುಕಳಿಸದಂತೆ ಎಲ್ಲ ಶಿಕ್ಷಕರು ಎಚ್ಚರಿಕೆಯಿಂದ ಕೆಲಸ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಬಸವಕಲ್ಯಾಣ ಉಪವಿಭಾಗಾಧಿ ಕಾರಿ ಮುಕುಲ್‌ ಜೈನ್ ಮಾತನಾಡಿ, ಯಾವ ರೀತಿ ಗಣಿತ ಮತ್ತು ವಿಜ್ಷಾನ ವಿಷಯದ ಪ್ರಶ್ನೆ ಪತ್ರಿಕೆಯ ವಿಶ್ಲೇಷಣೆ ಮಾಡಬೇಕು ಎಂಬುದರ ಕುರಿತು ಹಾಗೂ ಬಹು ಆಯ್ಕೆ ಪ್ರಶ್ನೆಗಳಿಗೆ ಹೇಗೆ ಉತ್ತರಿಸಬೇಕು ಎಂಬುದರ ಕುರಿತು ಮುಖ್ಯ ಶಿಕ್ಷಕರಿಗೆ ವಿವರಿಸಿದರು.

ಪ್ರೊಬೆಷನರಿ ಐಎಎಸ್ ಅಧಿಕಾರಿ ರಮ್ಯಾ ಅವರು ಸಮಾಜಶಾಸ್ತ್ರ ವಿಷಯದ ಕುರಿತು ಮಾಹಿತಿ ನೀಡಿದರು. ಶಿಕ್ಷಣ ಇಲಾಖೆ, ಡಯಟ್ ಸೇರಿದಂತೆ ಇತರೆ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.