ADVERTISEMENT

ಧನ್‌–ಧಾನ್ಯ ಕೃಷಿ ಯೋಜನೆಯಲ್ಲಿ ಬೀದರ್‌ ಸೇರ್ಪಡೆಗೆ ಮನವಿ

ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್‌ ಭೇಟಿ ಮಾಡಿದ ಸಂಸದ ಸಾಗರ್‌ ಖಂಡ್ರೆ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2025, 5:11 IST
Last Updated 24 ಆಗಸ್ಟ್ 2025, 5:11 IST
ಸಂಸದ ಸಾಗರ್‌ ಖಂಡ್ರೆ ಅವರು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು
ಸಂಸದ ಸಾಗರ್‌ ಖಂಡ್ರೆ ಅವರು ನವದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್‌ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು   

ಬೀದರ್: ಬೀದರ್‌ ಲೋಕಸಭಾ ಕ್ಷೇತ್ರವನ್ನು ಪ್ರಧಾನಮಂತ್ರಿ ಧನ್– ಧಾನ್ಯ ಕೃಷಿ ಯೋಜನೆ (ಪಿಎಂಡಿಡಿಕೆವೈ) ವ್ಯಾಪ್ತಿಗೆ ಸೇರಿಸಬೇಕು ಎಂದು ಸಂಸದ ಸಾಗರ್‌ ಖಂಡ್ರೆ ಅವರು ಕೇಂದ್ರ ಕೃಷಿ ಸಚಿವ ಶಿವರಾಜ ಸಿಂಗ್ ಚೌಹಾಣ್‌ ಅವರಿಗೆ ಮನವಿ ಮಾಡಿದ್ದಾರೆ.

ನವದೆಹಲಿಯಲ್ಲಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ಈ ಯೋಜನೆಯ ಅಡಿಯಲ್ಲಿ ದೇಶದ 100 ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಆಯ್ಕೆ ಮಾಡುತ್ತಿದೆ. ಆರು ವರ್ಷಗಳ ಕಾಲ ಪ್ರತಿ ವರ್ಷ ₹24,000 ಕೋಟಿ ಈ ಯೋಜನೆಯಡಿ ಅನುದಾನ ನೀಡಲಾಗುವುದು. ಒಟ್ಟು ₹1.44 ಲಕ್ಷ ಕೋಟಿ ಈ ಯೋಜನೆಗೆ ಕೇಂದ್ರ ಸರ್ಕಾರ ಮೀಸಲಿಟ್ಟಿದೆ. ಅದರ ಫಲ ಬೀದರ್‌ ಜಿಲ್ಲೆಗೂ ಒದಗಿಸಿಕೊಡಬೇಕು’ ಎಂದು ಕೋರಿದರು.

‘ಈ ಯೋಜನೆಯ ಅನುಷ್ಠಾನದಿಂದ ಬೀದರ್ ಜಿಲ್ಲೆಯ ಕೃಷಿ ಕ್ಷೇತ್ರ ಮತ್ತಷ್ಟು ಬಲವರ್ಧನೆಗೊಳ್ಳಲಿದೆ. ರೈತರಿಗೆ ಉತ್ತಮ ಅವಕಾಶಗಳು, ಆಧುನಿಕ ಕೃಷಿ ಸೌಲಭ್ಯಗಳು ಹಾಗೂ ಸಮೃದ್ಧ ಜೀವನದ ದಾರಿ ಸುಗಮವಾಗಲಿದೆ ಎಂದು ಮನವರಿಕೆ ಮಾಡಲಾಯಿತು. ಇದಕ್ಕೆ ಕೃಷಿ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ’ ಎಂದು ಶುಕ್ರವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.