ADVERTISEMENT

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಬೀದರ್ ಡಿಎಚ್‌ಒ ಕಚೇರಿ ಅಧಿಕಾರಿ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 7:19 IST
Last Updated 16 ಆಗಸ್ಟ್ 2025, 7:19 IST
ಕ್ರಿಸ್ತದಾಸ್‌
ಕ್ರಿಸ್ತದಾಸ್‌   

ಬೀದರ್: ₹5 ಸಾವಿರ ಲಂಚ ಪಡೆಯುತ್ತಿದ್ದಾಗ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯ ಎಚ್‌ಐಒ ಕ್ರಿಸ್ತ್‌ದಾಸ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

‘ಪೆಟ್ರೋಲ್ ‌ಬಂಕ್‌ಗೆ ಎನ್‌ಒಸಿ ಕೊಡಲು ₹5 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಾಹಿತಿ ಮೇರೆಗೆ ದಾಳಿ ನಡೆಸಿ, ಹಣದ ಸಮೇತ ಶುಕ್ರವಾರ ವಶಕ್ಕೆ ಪಡೆಯಲಾಗಿದೆ’ ಎಂದು ಲೋಕಾಯುಕ್ತ ಪೊಲೀಸ್‌ ಮೂಲಗಳು ತಿಳಿಸಿವೆ.

ಲೋಕಾಯುಕ್ತ ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.