ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಅವರು ಏಪ್ರಿಲ್ 8ರಿಂದ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಏ.8ರಂದು ಬೆಳಿಗ್ಗೆ 9.30ಕ್ಕೆ ಘಮಸುಬಾಯಿ ತಾಂಡಾದಿಂದ ಹೊರಟು ಬೀದರ್ ನಗರಕ್ಕೆ ಆಗಮಿಸುವರು.
ಮಧ್ಯಾಹ್ನ 12 ಗಂಟೆಗೆ ಕೋವಿಡ್ 19 ಸೋಂಕು ಮತ್ತು ಲಾಕ್‍ಡೌನ್ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ಬಳಿಕ ಘಮಸುಬಾಯಿ ತಾಂಡಾಕ್ಕೆ ತೆರಳಿ ವಾಸ್ತವ್ಯ ಮಾಡುವರು. ಏಪ್ರಿಲ್ 9 ಮತ್ತು 10ರಂದು ಘಮಸುಬಾಯಿ ತಾಂಡಾದಲ್ಲೇ ವಾಸ್ತವ್ಯ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.