
ಬೀದರ್: ರಾಜ್ಯ ಸರ್ಕಾರಿ ನೌಕರರ ಎರಡು ದಿನಗಳ ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಇಲ್ಲಿಯ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಂಗಳವಾರ ಚಾಲನೆ ನೀಡಿದರು.
ಮೊದಲ ದಿನ ನಡೆದ ವಿವಿಧ ಕ್ರೀಡೆ ಹಾಗೂ ಸ್ಪರ್ಧೆಗಳಲ್ಲಿ ನೌಕರರು ಉತ್ಸಾಹದಿಂದ ಪಾಲ್ಗೊಂಡರು.
ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸೋಮಶೇಖರ ಬಿರಾದಾರ ಚಿದ್ರಿ, ರಾಜ್ಯ ಪರಿಷತ್ ಸದಸ್ಯ ರಾಜಕುಮಾರ ಮಾಳಗೆ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಭುಲಿಂಗ ತೂಗಾವೆ, ಖಜಾಂಚಿ ದೇವಪ್ಪ ಚಾಂಬೋಳೆ, ಗೌರವಾಧ್ಯಕ್ಷ ಸೂರ್ಯಕಾಂತ ಬಿರಾದಾರ, ಕಾರ್ಯಾಧ್ಯಕ್ಷ ಶಿವರಾಜ ಕಪಲಾಪುರೆ, ಉಪಾಧ್ಯಕ್ಷರಾದ ಗೌತಮ ಚಿಂತಲಗೇರಾ, ಅಬ್ದುಲ್ ಸತ್ತಾರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ್, ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು, ತಾಲ್ಲೂಕು ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕ್ರೀಡಾಪಟುಗಳು ಇದ್ದರು.
ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.