ADVERTISEMENT

ಬೀದರ್‌: ಪೊಲೀಸ್‌ ಮ್ಯಾರಾಥಾನ್‌ನಲ್ಲಿ ಉತ್ಸಾಹದ ಓಟದ ರಂಗು

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2026, 5:55 IST
Last Updated 2 ಮಾರ್ಚ್ 2026, 5:55 IST
ಬೀದರ್‌ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಬೀದರ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು, ಸಿಬ್ಬಂದಿ ವರ್ಗ
ಬೀದರ್‌ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ಬೀದರ್‌ನಲ್ಲಿ ಭಾನುವಾರ ಏರ್ಪಡಿಸಿದ್ದ ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡಿದ್ದ ಅಧಿಕಾರಿಗಳು, ಸಿಬ್ಬಂದಿ ವರ್ಗ   

ಬೀದರ್‌: ಬೀದರ್‌ ಜಿಲ್ಲಾ ಪೊಲೀಸ್‌ ಇಲಾಖೆಯಿಂದ ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಮ್ಯಾರಾಥಾನ್‌ನಲ್ಲಿ ಜನ ಉತ್ಸಾಹದಿಂದ ಓಡಿದರು.

ನಗರದ ಚಿದಂಬರಾಶ್ರಮದಲ್ಲಿ ಭಾನುವಾರ ಬೆಳಿಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರದೀಪ್‌ ಗುಂಟಿ ಅವರು ಮ್ಯಾರಾಥಾನ್‌ಗೆ ಚಾಲನೆ ನೀಡಿದರು.

ಅಲ್ಲಿಂದ ಆರಂಭಗೊಂಡ ಓಟ ಗುಂಪಾ ಸಿದ್ದಾರೂಢ ವೃತ್ತ, ಕುಂಬಾರವಾಡ ಕ್ರಾಸ್‌, ಮೈಲೂರ್ ಕ್ರಾಸ್‌, ವಿದ್ಯಾನಗರ ಕಾಲೊನಿ, ಬೊಮ್ಮಗೊಂಡೇಶ್ವರ ವೃತ್ತ, ಮಹಾವೀರ ವೃತ್ತದ ಮೂಲಕ ಹಾದು ಕೇಂದ್ರ ಬಸ್‌ ನಿಲ್ದಾಣ ಸಮೀಪದ ಬರೀದ್‌ ಷಾಹಿ ಉದ್ಯಾನದ ಎದುರು ಕೊನೆಗೊಂಡಿತು.

ADVERTISEMENT

ಪೊಲೀಸ್‌ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡವರಿಗೆ ಪ್ರದೀಪ್‌ ಗುಂಟಿ ಅವರು ಪ್ರಮಾಣ ಪತ್ರಗಳನ್ನು ವಿತರಿಸಿದರು.

ಬಳಿಕ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಮತ್ತು ಡ್ರಗ್ಸ್‌ ಮುಕ್ತ ಬೀದರ್‌ ಜಿಲ್ಲೆಗಾಗಿ ಮ್ಯಾರಾಥಾನ್‌ ಹಮ್ಮಿಕೊಂಡಿದ್ದು, ಉತ್ತಮ ಸ್ಪಂದನೆ ದೊರೆತಿದೆ ಎಂದು ಹೇಳಿದರು.

ಮ್ಯಾರಾಥಾನ್‌ನಲ್ಲಿ ಪಾಲ್ಗೊಂಡವರಿಗೆ ಎಸ್ಪಿ ಪ್ರದೀಪ್‌ ಗುಂಟಿ ಪ್ರಮಾಣ ಪತ್ರ ವಿತರಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.