ಬೀದರ್: ಮುಚ್ಚುವ ಹಂತಕ್ಕೆ ತಲುಪಿರುವ ಕನ್ನಡ ಶಾಲೆಗಳ ಉಳಿವಿಗೆ ಹೋರಾಟ ನಡೆಸಲು ನಗರದ ಜಿಲ್ಲಾ ಕನ್ನಡ ಭವನದಲ್ಲಿ ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಘಟಕದ ಮುಂದಾಳತ್ವದಲ್ಲಿ ಸೋಮವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯಲ್ಲಿ ಒಕ್ಕೊರಲ ನಿರ್ಧಾರ ಕೈಗೊಳ್ಳಲಾಯಿತು.
ಕನ್ನಡ ಜನ ಜಾಗೃತಿ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಮಾತನಾಡಿ, ಕನ್ನಡ ಪರ ಸಂಘಟನೆಗಳ ರಾಜ್ಯ ಪ್ರಮುಖರ ಭೇಟಿಗೆ ಶೀಘ್ರದಲ್ಲಿಯೇ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಗಳ ನಿಯೋಗ ಬೆಂಗಳೂರಿಗೆ ಕರೆದೊಯ್ಯಲಾಗುವುದು. ಕನ್ನಡ ಪರ ಸಂಘಟನೆಗಳ ಪ್ರಮುಖರಿಗೆ ಕನ್ನಡ ಶಾಲೆಗಳು ಎದುರಿಸುತ್ತಿರುವ ಸಮಸ್ಯೆಗಳು ಹಾಗೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮನವರಿಕೆ ಮಾಡಲಾಗುವುದು ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ ಚನಶೆಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಮುಧೋಳ, ಜಯ ಕರ್ನಾಟಕ ಜನಪರ ವೇದಿಕೆಯ ಸಂಜು ಡೊಳ್ಳೆ, ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ ಶೆಟ್ಟಿ ಬಣದ ಜಿಲ್ಲಾ ಘಟಕದ ಅಧ್ಯಕ್ಷ ಪೀಟರ್ ಚಿಟಗುಪ್ಪ, ಕನ್ನಡ ಸೇನೆ ಕರ್ನಾಟಕ ಜಿಲ್ಲಾ ಘಟಕದ ಅಧ್ಯಕ್ಷ ರವಿ ಸ್ವಾಮಿ ನಿರ್ಣಾ, ಪ್ರಮುಖರಾದ ಎಸ್.ಎಂ. ಜನವಾಡಕರ್, ಸೋಮನಾಥ ಮುದ್ದಾ, ಗುರುನಾಥ ದೇಶಮುಖ ಸಂತಪುರ, ಬಸವರಾಜ ಶೆಟಕಾರ್ ಔರಾದ್ ಮತ್ತಿತರರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.