ಬೀದರ್: ಜಿಲ್ಲೆಯ ರೈತರ ಹಿತದೃಷ್ಟಿಯಿಂದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ನೋಂದಣಿ ಅವಧಿಯನ್ನು ಆಗಸ್ಟ್ 15ರವರೆಗೆ ವಿಸ್ತರಿಸಬೇಕು ಎಂದು ಜಿಲ್ಲಾ ಸಮಗ್ರ ಅಭಿವೃದ್ಧಿ ಹೋರಾಟ ಸಮಿತಿ ಅಧ್ಯಕ್ಷ ಶ್ರೀಕಾಂತ ಸ್ವಾಮಿ ಒತ್ತಾಯಿಸಿದ್ದಾರೆ.
ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನವಾಗಿದೆ. ಆದರೆ, ನೆಟ್‍ವರ್ಕ್ ಸಮಸ್ಯೆಯಿಂದ ನೋಂದಣಿ ಸಾಧ್ಯವಾಗುತ್ತಿಲ್ಲ. ಸಕಾಲಕ್ಕೆ ಮಳೆಯಾಗದ ಕಾರಣ ಜಿಲ್ಲೆಯ ರೈತರು ತಡವಾಗಿ ಬಿತ್ತನೆ ಮಾಡಿದ್ದಾರೆ. ಕೆಲವರು ಬಿತ್ತನೆಯನ್ನೇ ಮಾಡಿಲ್ಲ. ಇದೀಗ ಅತಿವೃಷ್ಟಿಯಿಂದ ಮೊಳಕೆಗಳು ಹಾಳಾಗಿವೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.