ಬೀದರ್: ಕೊಳಾರ ಕೈಗಾರಿಕಾ ಪ್ರದೇಶದ ಆಯಿಲ್ ರಿಕವರಿ ಫ್ಯಾಕ್ಟರಿಯಲ್ಲಿ ಬೆಂಕಿ
ಬೀದರ್: ನಗರ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶದ ಆಯಿಲ್ ರಿಕವರಿ ಫ್ಯಾಕ್ಟರಿಯಲ್ಲಿ ಶನಿವಾರ ರಾತ್ರಿ ಬೆಂಕಿ ಹೊತ್ತಿಕೊಂಡು ಧಗಧಗನೆ ಉರಿದ ಘಟನೆ ನಡೆದಿದೆ.
ಘಟನೆಯಲ್ಲಿ ನಾಲ್ಕೈದು ಬ್ಯಾರಲ್ ಆಯಿಲ್ ಬೆಂಕಿಗೆ ಹೊತ್ತಿ ಉರಿದಿದೆ. ಘಟನೆಯಲ್ಲಿ ಅಲ್ಲಿನ ಸಿಬ್ಬಂದಿಗೆ ಯಾವುದೇ ಹಾನಿ ಉಂಟಾಗಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಹರಸಾಹಸ ನಡೆಸಿ, ಬೆಂಕಿಯನ್ನು ನಂದಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.