ಬೀದರ್: ನಗರದ ಬೀದರ್–ಕಮಠಾಣ ರಸ್ತೆಯ ಕೆಇಬಿ ಫಂಕ್ಷನ್ ಹಾಲ್ ಎದುರಿನ ಖಾಲಿ ಜಾಗದಲ್ಲಿ ಅಕ್ರಮವಾಗಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ₹24.92 ಲಕ್ಷ ಮೌಲ್ಯದ 24.920 ಕೆ.ಜಿ ಗಾಂಜಾ ಜಪ್ತಿ ಮಾಡಿ, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದಾರೆ.
ಗಾಂಜಾ ಅನ್ನು ಪ್ಲಾಸ್ಟಿಕ್ ಚೀಲಗಳಲ್ಲಿ ಇಟ್ಟುಕೊಂಡು ಆರೋಪಿ ಮಾರಾಟ ಮಾಡುತ್ತಿದ್ದ. ಖಚಿತ ಮಾಹಿತಿ ಮೇರೆಗೆ ಗಾಂಧಿಗಂಜ್ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ, ಮಾಲಿನ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಸೋಮವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎನ್‌ಡಿಪಿಎಸ್ ಕಾಯ್ದೆಯಡಿ ಗಾಂಧಿ ಗಂಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್‌ಪಿ ಶಿವನಗೌಡ ಪಾಟೀಲ, ಠಾಣೆಯ ಪಿಐ ಆನಂದರಾವ್ ಎಸ್.ಎನ್., ಸಿಬ್ಬಂದಿ ಸಂಜುಕುಮಾರ, ಅನಿಲ್, ಸುಧಾಕರ, ರಾಜಕುಮಾರ, ಇಸ್ಮಾಯಿಲ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.