ADVERTISEMENT

ಬೀದರ್‌: ನಿಲ್ಲದ ಮಳೆ; ಐದು ಮನೆಗಳಿಗೆ ಹಾನಿ

​ಪ್ರಜಾವಾಣಿ ವಾರ್ತೆ
Published 26 ಜುಲೈ 2025, 6:53 IST
Last Updated 26 ಜುಲೈ 2025, 6:53 IST
   

ಬೀದರ್‌: ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದ್ದು, ಸತತ ವರ್ಷಧಾರೆಗೆ ಐದು ಮನೆಗಳಿಗೆ ಹಾನಿ ಉಂಟಾಗಿದೆ.

ಔರಾದ್‌ ತಾಲ್ಲೂಕಿನ ಚಿಂತಾಕಿಯ ಅಶೋಕ‌ ನಗರ ತಾಂಡಾ ಹಾಗೂ ಬರದಾಪೂರದಲ್ಲಿ ತಲಾ ಎರಡು ಮನೆಗಳ ಗೋಡೆ ಕುಸಿದು ಬಿದ್ದರೆ, ಕಮಲನಗರ ತಾಲ್ಲೂಕಿನ ಮುಧೋಳನಲ್ಲಿ (ಬಿ) ಒಂದು ಮನೆಗೆ ಹಾನಿ ಉಂಟಾಗಿದೆ.

ಸತತ ಮೂರನೇ ದಿನವಾದ ಶುಕ್ರವಾರವೂ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಜಿಟಿಜಿಟಿ ಮಳೆಯಾಗಿದೆ. ಬಿಡುವು ಕೊಡದೇ ಒಂದೇ ಸಮನೆ ಮಳೆ ಸುರಿಯುತ್ತಿರುವ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ಶ್ರಾವಣ ಮಾಸದ ಅಂಗವಾಗಿ ಶುಕ್ರವಾರ ಸಂಜೆ ಹಲವೆಡೆ ಪ್ರವಚನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಆದರೆ, ಮಳೆಯಿಂದ ಕಾರ್ಯಕ್ರಮಗಳಿಗೆ ತೊಡಕಾಯಿತು. ಹಲವೆಡೆ ತಡವಾಗಿ ಕಾರ್ಯಕ್ರಮಗಳು ಶುರುವಾದವು. ಭಕ್ತರ ಸಂಖ್ಯೆ ಕೂಡ ಕಡಿಮೆ ಇತ್ತು. ಶನಿವಾರವೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.