ಬೀದರ್: ವಾರದ ಬಿಡುವಿನ ನಂತರ ಜಿಲ್ಲೆಯ ಹಲವೆಡೆ ಬುಧವಾರ ಮಳೆಯಾಗಿದೆ.
ಬೀದರ್ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ದಿನವಿಡೀ ಬಿಟ್ಟು ಬಿಟ್ಟು ಜಿಟಿಜಿಟಿ ಮಳೆ ಸುರಿದಿದೆ. ಜಿಲ್ಲೆಯ ಹುಲಸೂರ, ಭಾಲ್ಕಿ, ಔರಾದ್, ಹುಮನಾಬಾದ್ ಹಾಗೂ ಚಿಟಗುಪ್ಪದ ಕೆಲವು ಭಾಗಗಳಲ್ಲೂ ಮಳೆಯಾಗಿರುವುದು ವರದಿಯಾಗಿದೆ.
ದಿನವಿಡೀ ಬೀದರ್ ನಗರದಲ್ಲಿ ಜಿಟಿಜಿಟಿ ಮಳೆಯಾಗಿದ್ದರಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ಕಳೆದ ಒಂದು ವಾರದಿಂದ ಜಿಲ್ಲೆಯಾದ್ಯಂತ ಪ್ರಖರವಾದ ಬಿಸಿಲು ಇತ್ತು. ಉದ್ದು, ಹೆಸರಿನ ರಾಶಿ ಚುರುಕಾಗಿ ನಡೆದಿತ್ತು. ಆದರೆ, ಪುನಃ ಮಳೆಯಾದ ಕಾರಣ ರಾಶಿಗೆ ಮತ್ತೆ ಹಿನ್ನಡೆ ಉಂಟಾಗಿದೆ. ಆಗಸ್ಟ್ ಕೊನೆಯ ವಾರ, ಸೆಪ್ಟೆಂಬರ್ ಮೊದಲ ವಾರದ ಆರಂಭದ ಎರಡ್ಮೂರು ದಿನ ಭಾರಿ ಮಳೆ ಮತ್ತು ಪ್ರವಾಹದಿಂದ ಜಿಲ್ಲೆಯಾದ್ಯಂತ ಅಪಾರ ಬೆಳೆ ಹಾನಿ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.