ಬೀದರ್ ನಗರದಲ್ಲಿ ಭಾರಿ ಮಳೆಯಾಗಿದೆ
ಪ್ರಜಾವಾಣಿ ಚಿತ್ರ: ಲೋಕೇಶ ವಿ. ಬಿರಾದಾರ
ಬೀದರ್: ನಗರದಲ್ಲಿ ಮಂಗಳವಾರ ಸುರಿದ ಭಾರಿ ಮಳೆಗೆ ಪ್ರಮುಖ ರಸ್ತೆಗಳೆಲ್ಲಾ ಜಲಾವೃತವಾಗಿ ಸಾರ್ವಜನಿಕರು ತೀವ್ರ ಪರದಾಟ ನಡೆಸಿದರು.
ನಗರದ ತಹಶೀಲ್ದಾರ್ ಕಚೇರಿ, ಹಳೆಯ ಜಿಲ್ಲಾಧಿಕಾರಿ ಕಚೇರಿ, ಮಹಾನಗರ ಪಾಲಿಕೆ ಕಚೇರಿಯ ಆವರಣ ಹಾಗೂ ಮುಖ್ಯರಸ್ತೆಯಲ್ಲಿ ಅಪಾರ ನೀರು ಸಂಗ್ರಹಗೊಂಡಿದ್ದರಿಂದ ಜನ ಸಮಸ್ಯೆ ಎದುರಿಸಿದರು.
ನಗರದ ಮನ್ನಳ್ಳಿ ರಸ್ತೆ, ನೆಹರೂ ಕ್ರೀಡಾಂಗಣ ರಸ್ತೆ, ಶಿವಾಜಿ ವೃತ್ತದಲ್ಲಿ ಅಪಾರ ನೀರು ಜಮಾವಣೆಗೊಂಡಿದ್ದರಿಂದ ಸಂಚಾರ ಅಸ್ತವ್ಯಸ್ತಗೊಂಡಿತು. ಮಧ್ಯಾಹ್ನ ಎರಡೂವರೆ ಗಂಟೆಗೆ ಆರಂಭಗೊಂಡ ಮಳೆ ಸಂಜೆ ಐದು ಗಂಟೆಯ ವರೆಗೆ ಸುರಿಯಿತು. ಸತತ ಮೂರನೇ ದಿನವೂ ಬಿರುಸಾಗಿ ಮಳೆಯಾಗಿದೆ.
ಬೀದರ್ ನಗರದಲ್ಲಿ ಭಾರಿ ಮಳೆಯಾಗಿದೆ
ಬೀದರ್ ನಗರದಲ್ಲಿ ಭಾರಿ ಮಳೆಯಾಗಿದೆ
ಬೀದರ್ ನಗರದಲ್ಲಿ ಭಾರಿ ಮಳೆಯಾಗಿದೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.