ADVERTISEMENT

ಕಮಲನಗರ: ಮಾರಕಾಸ್ತ್ರದಿಂದ ಹೊಡೆದು ವ್ಯಕ್ತಿ ಕೊಲೆ

​ಪ್ರಜಾವಾಣಿ ವಾರ್ತೆ
Published 28 ಆಗಸ್ಟ್ 2025, 14:39 IST
Last Updated 28 ಆಗಸ್ಟ್ 2025, 14:39 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಕಮಲನಗರ (ಬೀದರ್‌): ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ತಾಲ್ಲೂಕಿನ ಹೋಳಸಮುದ್ರ ಗ್ರಾಮದಲ್ಲಿ ನಡೆದಿದೆ.

ಯೋಗೇಶ ಏಕನಾಥ ಕೊಯ್ಲೆ (31) ಕೊಲೆಯಾದ ವ್ಯಕ್ತಿ. ಕ್ಷುಲ್ಲಕ ಕಾರಣಕ್ಕೆ ರಾಹುಲ್‌ ಜಾಧವ್‌ ಎಂಬ ವ್ಯಕ್ತಿ ಯೋಗೇಶ ಏಕನಾಥ ಕೊಯ್ಲೆಯ ಕುತ್ತಿಗೆಗೆ ಮಾರಕಾಸ್ತ್ರದಿಂದ ಇರಿದು ಬುಧವಾರ ರಾತ್ರಿ ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಮೃತನ ಹೆಂಡತಿ ರೇಖಾ ಯೋಗೇಶ ದೂರಿನನ್ವಯ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಎಸ್‍ಪಿ ಪ್ರದೀಪ್‌ ಗುಂಟಿ, ಡಿವೈಎಸ್‍ಪಿ ಶಿವಾನಂದ ಪವಾಡಶೆಟ್ಟಿ, ಸಿಪಿಐ ಶ್ರೀಕಾಂತ ಅಲ್ಲಾಪೂರ, ಪಿಎಸ್‍ಐ ಆಶಾ ರಾಠೋಡ್‌ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.